ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.
Advertisement
2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Advertisement
ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.
Advertisement