ಬೆಂಗಳೂರು: ಸಂಸತ್ ಅಧಿವೇಶನ ಮುಗಿದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಾ ಎಂಬುದರ ಕುರಿತು ರಾಜಕೀಯ ಅಂಗಳದಲ್ಲಿ ಚರ್ಚೆಗಳು ನಡೆದಿವೆ. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ನೀಡಿರುವ ಹೇಳಿಕೆ ಇಂತಹ ಅನುಮಾನಕ್ಕೆ ಕಾರಣವಾಗಿದೆ.
ನಗರದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತ ಈಗ ಬಿಜೆಪಿ ರಾಡಾರ್ ವ್ಯಾಪ್ತಿಯಲ್ಲಿದೆ. ಕರ್ನಾಟಕದಲ್ಲಿ ಅಪೂರ್ಣವಾಗಿರುವ ಕೆಲಸ ಪೂರ್ಣಗೊಳಿಸಬೇಕಾಗಿದೆ. ಆದಷ್ಟು ಬೇಗ ಸರ್ಕಾರ ಕಿತ್ತೊಗೆಯಬೇಕಿದೆ ಎಂದು ಹೇಳಿದ್ದಾರೆ.
Advertisement
Advertisement
ಈ ಮಧ್ಯೆ ಮಗ ಗ್ರಾಮ ವಾಸ್ತವ್ಯಕ್ಕೆ ಹೋದರೆ, ಅಪ್ಪ ಮಧ್ಯಂತರ ಚುನಾವಣೆಗೆ ಹೋಗೋಣ ಎನ್ನುತ್ತಿದ್ದಾರೆ. ಯೋಗ್ಯತೆ ಇಲ್ಲ ಅಂದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಅಂತಾ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಮಧ್ಯಂತರ ಚುನಾವಣೆಗೆ ಅವಕಾಶ ಕೊಡಲ್ಲ ಎಂದು ಮುರಳಿಧರ್ ರಾವ್ ಕೂಡ ಹೇಳಿದ್ದಾರೆ.
Advertisement
Advertisement
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆರ್.ಅಶೋಕ್ ಅವರು, ರಾಜ್ಯಗಳಲ್ಲೂ ಕಾಂಗ್ರೆಸ್ ಜಗಳವಾಡುತ್ತಿದೆ. ಚುನಾವಣೆ ಸೋಲಿನ ವಿಚಾರವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಲ್ಲ. ತಾನಾಗಿಯೇ ಮೈತ್ರಿ ಸರ್ಕಾರ ಪತನವಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]