ನವದೆಹಲಿ: ಜೀವನ ನಿರ್ವಹಣೆಗಾಗಿ ಟೀ ಮಾರುತ್ತಿದ್ದ ಬಿಜೆಪಿಯ ಕಾರ್ಪೋರೇಟರ್ ಅವತಾರ್ ಸಿಂಗ್ ಅವಿರೋಧವಾಗಿ ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಉತ್ತರ ದೆಹಲಿ ಮೇಯರ್ ಸ್ಥಾನಕ್ಕೇರಿದ ಮೊದಲ ದಲಿತ ಸಿಖ್ ನಾಯಕ ಎಂಬ ಹೆಗ್ಗಳಿಕೆಗೆ ಅವತಾರ್ ಸಿಂಗ್ ಪಾತ್ರರಾಗಿದ್ದಾರೆ.
Advertisement
ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಅವರು ಅವತಾರ್ ಸಿಂಗ್ ಹೆಸರನ್ನು ನಾಮನಿರ್ದೆಶನ ಮಾಡಿದ್ದರು. ಸೋಮವಾರ ನಡೆದ ಚುನಾವಣೆಯಲ್ಲಿ ಸಿಂಗ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ನಗರ ನಿಗಮದ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
Advertisement
Had a great interaction with Smt. Sunita Kangra, Shri Avtar Singh and Smt. Anju Kamalkant. They will be serving as Mayors of South Delhi, North Delhi and East Delhi Municipal Corporations respectively.
My best wishes to them as they embark on their efforts to transform Delhi. pic.twitter.com/8l1j5ey7ql
— Narendra Modi (@narendramodi) April 28, 2019
Advertisement
ಈ ವಿಚಾರವಾಗಿ ದೆಹಲಿ ಬಿಜೆಪಿಯ ಹಿರಿಯ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿ, ಅವತಾರ್ ಸಿಂಗ್ ಅವರು ಬಿಜೆಪಿಯ ಅತ್ಯಂತ ಶ್ರಮಜೀವಿ ಕಾರ್ಯಕರ್ತರು. ಚಹಾ ಮಾರುತ್ತಿದ್ದ ಸಿಂಗ್ ಅವರು ಕಠಿಣ ಪರಿಶ್ರಮದಿಂದ ಮೇಯರ್ ಸ್ಥಾನಕ್ಕೇರಿದ್ದಾರೆ ಎಂದು ಹೇಳಿ ಶ್ಲಾಘಿಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಅವತಾರ್ ಸಿಂಗ್ ಅವರಿಗೆ ಶುಭಕೋರಿದ್ದಾರೆ. ಅಷ್ಟೇ ಅಲ್ಲದೆ ದಕ್ಷಿಣ ದೆಹಲಿ ಹಾಗೂ ಪೂರ್ವ ದೆಹಲಿಗೆ ಕ್ರಮವಾಗಿ ಮೇರಯ್ ಆಗಿ ಆಯ್ಕೆಯಾದ ಸುನಿತಾ ಕಾಂಗ್ರಾ ಮತ್ತು ಅಂಜು ಕಮಲ್‍ನಾಥ್ ಅವರಿಗೂ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮೇಯರ್ ಆಯ್ಕೆಯಾದವರು ಒಂದು ವರ್ಷ ಅಧಿಕಾರ ನಡೆಸಲಿದ್ದಾರೆ. ದೆಹಲಿ ಕಾರ್ಪೋರೇಷನ್‍ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ. ಮೂರನೇ ವರ್ಷ ಪರಿಶಿಷ್ಟ ಜಾತಿಯ ಅಭ್ಯರ್ಥಿಯನ್ನು ಮೇಯರ್ ಮಾಡಬೇಕಿತ್ತು. ಹೀಗಾಗಿ ಬಿಜೆಪಿಯು ಅವತಾರ್ ಸಿಂಗ್ ಸೇರಿದಂತೆ ಮೂವರು ಪರಿಶಿಷ್ಟ ಜಾತಿಯ ನಾಯಕರಿಗೆ ಮೇಯರ್ ಅವಕಾಶ ಕಲ್ಪಿಸಿದೆ.