ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಬಿಜೆಪಿ (BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರ್ (Praveen Kumar Nettar) ಅವರ ನೂತನ ಮನೆಯ ಗೃಹ ಪ್ರವೇಶವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ನೆಟ್ಟಾರ್‌ನಲ್ಲಿ ನೆರವೆರಿದೆ.
ಬೆಳ್ಳಾರೆಯ ನೆಟ್ಟಾರ್‌ನ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಾಣವನ್ನು ಬಿಜೆಪಿ ವತಿಯಿಂದ ಮಾಡಿದ್ದಾರೆ. ಜೊತೆಗೆ ಮನೆ ಮುಂಭಾಗದಲ್ಲಿ ಪ್ರವೀಣ್ ಸ್ಮಾರಕ ನಿರ್ಮಿಸಲಾಗಿದೆ. ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಗುರುವಾರ ಲೋಕಾರ್ಪಣೆ ಮಾಡಲಾಯಿತು.
Advertisement
Advertisement
ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದರು. ಬಿಜೆಪಿ ವತಿಯಿಂದ ನಿರ್ಮಾಣಗೊಂಡ ಪ್ರವೀಣ್ ನೆಟ್ಟಾರ್‌ನ ಕನಸಿನ ಮನೆಯನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ರೈತ ಯುವಕರನ್ನ ಮದುವೆ ಆಗೋರಿಗೆ 2 ಲಕ್ಷ ಪ್ರೋತ್ಸಾಹ ಧನ – JDS ಪ್ರಣಾಳಿಕೆ ಬಿಡುಗಡೆ
Advertisement
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಲಾಗಿದೆ. ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು: ಸ್ಮೃತಿ ಇರಾನಿ