ನವದೆಹಲಿ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಬೆಂಗಳೂರು, ಕೊಡಗು, ಚೆನ್ನೈ, ಎರ್ನಾಕುಲಂ ಸೇರಿದಂತೆ 16 ಕಡೆ ದಾಳಿ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಚಿಕ್ಕೋಡಿ| ಪ್ರೀತಿಗೆ ವಿರೋಧ; ಪ್ರಿಯಕರನಿಂದ ಡಬಲ್ ಮರ್ಡರ್
Advertisement
Advertisement
ಕೊಡಗಿನ 4 ಕಡೆ ದಾಳಿ:
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಮಡಿಕೇರಿ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ. ಇಂದು ಬೆಳಿಗ್ಗೆ ನಸುಕಿನ ಸಮಯದಲ್ಲಿ ಮಡಿಕೇರಿಯ ಮುಸ್ತಾಫಾ, ಹೊಸತೋಟದ ನಿವಾಸಿ ಜುನೈದ್ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ತೌಶಿಕ್, ಸುಂಟಿಕೊಪ್ಪದ ಹನೀಫ್ ಎಂಬುವರ ಮನೆ ಮೇಲೆ ಏಕಾಕಾಲದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಮನೆಯವರ ವಿಚಾರಣೆ ನಡೆಸಿ ತೆರಳಿದೆ. ಸದ್ಯಕ್ಕೆ ಯಾವುದೇ ವ್ಯಕ್ತಿಯನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈನಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಂದಿದ್ದರು. ಆರೋಪಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ಎನ್ನಲಾಗಿದೆ.
Advertisement
ಆ.4 ರಂದು ತನಿಖೆಯನ್ನು ಕೈಗೆತ್ತಿಕೊಂಡ ಎನ್ಐಎ ಇದುವರೆಗೆ 19 ಜನರನ್ನು ಬಂಧಿಸಿದೆ. 21 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಅಪ್ಪ-ಅಮ್ಮ, ಸಹೋದರಿ ಹತ್ಯೆ ಪ್ರಕರಣ – ಮಗನಿಂದಲೇ ಕೃತ್ಯ
ಕೊಡಗು ಜಿಲ್ಲೆಯ ನಿವಾಸಿಯಾದ ತುಫೈಲ್, ಪಿಎಫ್‌ಐ ‘ಸೇವಾ ತಂಡ’ಗಳ ಉಸ್ತುವಾರಿ ಮತ್ತು ನಿಷೇಧಿತ ಸಂಘಟನೆಯ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ಸೇರಿದಂತೆ ಸುಧಾರಿತ ತರಬೇತಿಯನ್ನು ನಿಯಮಿತವಾಗಿ ನೀಡುವ ‘ಪಿಎಫ್‌ಐ ಮಾಸ್ಟರ್ ಟ್ರೈನರ್’ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ಈತ ಕರ್ನಾಟಕದ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ನೆಟ್ಟಾರುವಿನ ಮೂವರು ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ಎನ್‌ಐಎ ತಿಳಿಸಿದೆ.