ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.
ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5
— Basavaraj S Bommai (@BSBommai) July 26, 2022
Advertisement
ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
Advertisement
ಕರಾವಳಿಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಾಕಾಬಂಧಿ ರಚಿಸಲಾಗಿದೆ. ಕೊಲೆಗಾರರ ಪತ್ತೆಗೆ 4 ತಂಡ ರಚನೆ ಮಾಡಲಾಗಿದ್ದು, ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವಕ್ಕೆ ಟಕ್ಕರ್ – ಬಿಜೆಪಿಯಿಂದ ಜನೋತ್ಸವ
Advertisement
ಏನಿದು ಪ್ರಕರಣ?
ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ, ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.
ಪ್ರವೀಣ್ ಪತ್ನಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಹತ್ಯೆ ಕಳೆದ 4 ದಿನಗಳ ಹಿಂದೆ ನಡೆದಿದ್ದ ಅನ್ಯಕೋಮಿನ ಯುವಕನೋರ್ವನ ಕೊಲೆಗೆ ಪ್ರತೀಕಾರ ಎನ್ನಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಲವು ಪೋಸ್ಟ್‌ಗಳು ಹರಿದಾಡಿದ್ದವು. ಹೀಗಾಗಿ, ಇದು ಸೇಡಿನ ಹತ್ಯೆ ಇರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ಹತ್ಯೆ ಖಂಡಿಸಿ, ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪುತ್ತೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಧರಣಿ ಕೂತು ಡಿಸಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.