ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಗೃಹ ಸಚಿವರು ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ, ಮೋದಿಗೆ ಹೇಳಿ ಜೆಡಿಎಸ್ (JDS) -ಬಿಜೆಪಿ (BJP) ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು ಎಂದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭಾ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಇವಿಎಂ ಧ್ವಂಸ ಆರೋಪ – ಬಿಜೆಪಿ ಅಭ್ಯರ್ಥಿ ಅರೆಸ್ಟ್
ಕೆಲಸ ಆಗಬೇಕಾದರೆ ಕೈ ಎತ್ತು, ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್‍ನ ನೀತಿ. ಇವರು ಹಿಂದಿನ ಮೈತ್ರಿ ಸರ್ಕಾರದ ವೇಳೆ ಕುಮಾರಸ್ವಾಮಿಯವರ (H.D Kumaraswamy) ಬೆನ್ನಿಗೆ ಚೂರಿ ಹಾಕಿದ್ದರು. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ. ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರ ಎಲ್ಲಾ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣ್‍ರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ʻಗ್ರ್ಯಾಂಡ್ ಪ್ರಿಕ್ಸ್ʼಪ್ರಶಸ್ತಿ ಗೆದ್ದು ಇತಿಹಾಸ ಬರೆದ ನಿರ್ದೇಶಕಿ ಪಾಯಲ್ ಕಪಾಡಿಯಾಗೆ ಮೋದಿ ಅಭಿನಂದನೆ!