ತುಮಕೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರರನ್ನು ಗಲ್ಲಿಗೇರಿಸಿ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯಚಂದ್ರ ಕೀಳುತನದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಜೀವನ ಚರಿತ್ರೆಯೇ ಹಾಗೆ, ಅದು ಅವರ ಹುಟ್ಟು ಗುಣ. ಪ್ರಧಾನಿ ನರೇಂದ್ರ ಮೋದಿಯವರನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ. ಟಿ.ಬಿ.ಜಯಚಂದ್ರ ಒಂದು ಸೊಳ್ಳೆ, ಅವರ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ದೇಶದ್ರೋಹಿಯಾದ ವ್ಯಕ್ತಿ ದೇಶಭಕ್ತನ ವಿರುದ್ಧ ಮಾತನಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಕೇಂದ್ರ ಸರ್ಕಾರ ಜಯಚಂದ್ರ ಹೇಳಿಕೆಯನ್ನು ದೇಶದ್ರೋಹದ ಪ್ರಕರಣವನ್ನಾಗಿ ದಾಖಲಿಸಿ, ಕೂಡಲೇ ಅವರನ್ನು ಬಂಧಿಸಬೇಕು. ಅಲ್ಲದೇ ಐಪಿಸಿ ಸೆಕ್ಷನ್ 206 ಅಡಿ ಗಲ್ಲಿಗೇರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಟಿ.ಬಿ.ಜಯಚಂದ್ರ ಹೇಳಿದ್ದೇನು?
ನೋಟು ನಿಷೇಧ ಖಂಡಿಸಿ ಶುಕ್ರವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಮಾಜಿ ಸಚಿವರು, ನೋಟು ರದ್ಧತಿಯಲ್ಲಿ ನನಗೆ 50 ದಿನ ಕಾಲವಕಾಶ ಕೊಡಿ ಇದರಲ್ಲಿ ಗೆದ್ದು ಬರುತ್ತೇನೆ. ಒಂದು ವೇಳೆ ಬರದಿದ್ದರೆ ನನ್ನನ್ನ ಜೀವಂತವಾಗಿ ಸುಡಿ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದರು. ಅವರ ಮಾತಿನಂತೆ ಬಹುಶಃ ಜೀವಂತವಾಗಿ ಸುಡುವ ಕಾಲ ಇಂದು ಬಂದಿದೆ ಎಂದು ಹೇಳಿಕೆ ನೀಡಿದ್ದರು.
Advertisement
ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ವಿರುದ್ಧ ಕಿಡಿಕಾರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಸಹಿಸದೆ ಬುದ್ಧಿ ಸ್ಥಿಮಿತತೆ ಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ. ಮಾಜಿ ಕಾನೂನು ಸಚಿವರಾಗಿದ್ದ ಜಯಚಂದ್ರ ಅವರ ಹೇಳಿಕೆ ಖಂಡನೀಯ. ಅವರ ಕೀಳುಮಟ್ಟದ, ಆಕ್ಷೇಪಾರ್ಹ ಹೇಳಿಕೆಗೆ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews