ನವದೆಹಲಿ: ಭಾರತೀಯ ಕರೆನ್ಸಿಯ (Indian Currency) ನೋಟುಗಳ ಲಕ್ಷ್ಮೀದೇವಿ ಹಾಗೂ ಗಣೇಶನ ಚಿನ್ಹೆಗಳನ್ನು ಮುದ್ರಿಸಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಲಹೆಗೆ ಬಿಜೆಪಿ (BJP) ನಾಯಕರೊಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
200 ರೂ. ಮುಖಬೆಲೆಯ ನೋಟಿನ ಮೇಲೆ ಛತ್ರಪತಿ ಶಿವಾಜಿ ಚಿತ್ರವನ್ನು (Chhatrapati Shivaji Photo) ಫೋಟೋಶಾಪ್ (PhotoShop) ಮಾಡಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿ (BJP) ನಾಯಕ ನಿತೇಶ್ ರಾಣೆ ಹಂಚಿಕೊಂಡು ವಿವಾದ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ
Advertisement
Ye perfect hai ! ???? pic.twitter.com/GH6EMkYeSN
— nitesh rane (@NiteshNRane) October 26, 2022
Advertisement
ಕಂಕಾವ್ಲಿಯ ಶಾಸಕ ರಾಣೆ ಅವರು ಫೋಟೋವನ್ನು ಟ್ವೀಟ್ ಮಾಡಿ, `ಯೇ ಪರ್ಫೆಕ್ಟ್ ಹೈ (ಇದು ಸರಿಯಾಗಿದೆ)’ ಎಂದು ಶೀರ್ಷಿಕೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ
Advertisement
ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಕೇಜ್ರಿವಾಲ್, ಭಾರತೀಯ ಕರೆನ್ಸಿಯ (Indian Currency) ಮೇಲೆ ಲಕ್ಷ್ಮೀದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಸೂಚಿಸಿದ್ದಾರೆ. ಇದು ಆರ್ಥಿಕತೆ ಹೆಚ್ಚಿಸುವ ಒಂದು ಮಾರ್ಗವಾಗಿದೆ. ಜೊತೆಗೆ ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿತವಾಗುವುದನ್ನು ತಡೆಯುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
Advertisement
ಈ ಸಲಹೆಯು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ತೀವ್ರ ವಾಗ್ದಾಳಿಗೆ ಮುಂದಾಗಿದ್ದಾರೆ. ಕೇಜ್ರಿವಾಲ್ ತಮ್ಮ ಸರ್ಕಾರದ ದೋಷಗಳು ಹಾಗೂ ಎಎಪಿ ವಿರೋಧಿ ಮನಸ್ಥಿತಿಯನ್ನು ಬೇರೆಡೆಗೆ ಸೆಳೆಯಲು ರಾಜಕೀಯ ನಾಟಕವಾಡುತ್ತಿದೆ ಎಂದು ಕಿಡಿಕಾರಿದೆ.