Connect with us

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ.

ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್ ಗ್ರಾಮದವರು.

ಶಿವಕುಮಾರ್ ತನ್ನ ಸೆಕ್ಯೂರಿಟಿ ಗಾರ್ಡ್ ಫಾರ್ಚೂನರ್ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟಿಗ್ರಿ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಗುದ್ದಿದೆ. ದುಷ್ಕರ್ಮಿಗಳ ಗುಂಡಿನ ದಾಳಿಗೆ ಇಬ್ಬರೂ ಬಲಿಯಾಗಿದ್ದಾರೆ.

ಕಾರಿನಲ್ಲಿದ್ದ ಹ್ಯಾನ್ಸ್ಪಲ್ ಎಂಬರಿಗೆ ಗುಂಡು ತಗುಲಿದ್ದು, ಗಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ ಅಂತ ಜಿಟಿಬಿ ಆಸ್ಪತ್ರೆ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಇನ್ನು ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ನರೆದಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವರದಿಗಳ ಪ್ರಕಾರ ಆರೋಪಿಗಳು ಕಾರನ್ನು ಅರ್ಧ ಕಿ.ಮೀ ದೂರದವರೆಗೆ ಹಿಂಬಾಲಿಸಿಕೊಂಡು ಬಂದು ಗುಂಡಿನ ದಾಳಿ ನಡೆಸಿದ್ದಾರೆ ಅಂತ ತಿಳಿದುಬಂದಿದೆ.

ಈ ಹಿಂದೆ ಅಂದರೆ ನವೆಂಬರ್ 2ರಂದು ಜಮ್ಮು-ಕಾಶ್ಮೀರದ ಸೋಫಿಯಾನ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಬಿಜೆಪಿ ಯುವ ಘಟಕದ ಅಧ್ಯಕ್ಷ ಬಲಿಯಾಗಿದ್ದರು. ಅಧ್ಯಕ್ಷ ಗೌರ್ ಅಹಮದ್ ಭಟ್ ಎಂಬವರನ್ನು ಉಗ್ರರು ಕತ್ತು ಸೀಳಿ ಕೊಲೆಗೈದಿದ್ದರು.

Advertisement
Advertisement