ಪಾಟ್ನಾ: ಬಿಹಾರದಲ್ಲಿ (Bihar) ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಸುರೇಂದ್ರ ಕೆವತ್ (52) ಹತ್ಯೆಯಾದ ಬಿಜೆಪಿ ನಾಯಕ. ಸುರೇಂದ್ರ ಅವರು ಶೇಕ್‌ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಇದನ್ನೂ ಓದಿ: Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು
ಸುರೇಂದ್ರ ಅವರಿಗೆ 4 ಗುಂಡುಗಳು ತಗುಲಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ
ಬಿಹಾರದಲ್ಲಿ 2 ವಾರದ ಅಂತರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ ಮಾಡಲಾಗಿದ್ದು, ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (Gopal Khemka) ಅವರನ್ನು ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ
ಇದೀಗ ಸಿಎಂ ನಿತೀಶ್ ಕುಮಾರ್ ಆಡಳಿತದ ಬಗ್ಗೆ ವಿಪಕ್ಷಗಳು ಕಿಡಿಕಾರುತ್ತಿದ್ದು, ಮುಖ್ಯಮಂತ್ರಿಯವರ ಆರೋಗ್ಯದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇಬ್ಬರು ನಿಷ್ಪ್ರಯೋಜಕ ಬಿಜೆಪಿ ಉಪಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.