ಚಂಡೀಗಢ: ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ ಕೊಂದಿರುವ ಘಟನೆ ಇಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಇಲ್ಲಿನ ದರ್ ಬಜಾರ್ ಬಳಿಯ ಗುರುದ್ವಾರದ ರಸ್ತೆಯಲ್ಲಿರುವ ಬಟ್ಟೆ ಮಳಿಗೆಯೊಂದರಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಜೆಪಿ ಮುಖಂಡ ಸುಖಬೀರ್ ಖತಾನ ಅವರನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭೆಟಿ ನೀಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಆಗಸ್ಟ್ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?
Advertisement
Advertisement
ಸುಖಬೀರ್ ಖನಾತಾ ಅವರು ಬಟ್ಟೆ ಬಳಿಗೆ(ಶೋ ರೂಮ್) ಪ್ರವೇಶಿಸುತ್ತಿದ್ದಂತೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಶಬ್ಧ ಕೇಳುತ್ತಿದ್ದಂತೆ ಇತರ ವ್ಯಾಪಾರಿಗಳೂ ಸ್ಥಳದಿಂದ ಹೆದರಿ ಓಡಿ ಹೋಗಿದ್ದಾರೆ. ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಖತಾನ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು, ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಸಹರಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಮಾಪಕ ರವೀಂದರ್ ಕೈ ಹಿಡಿದ ನಟಿ, ಖ್ಯಾತ ನಿರೂಪಕಿ ಮಹಾಲಕ್ಷ್ಮೀ
Advertisement
Advertisement
ಸುಖಬೀರ್ ಖತಾನ ಅವರು ಗುರ್ಗಾಂವ್‌ನ ಸೊಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರು ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಆಪ್ತರಾಗಿದ್ದರು. ನಗರದ ಸಮೀಪದ ರಿಥೋಜ್ ಗ್ರಾಮದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸಿದ್ಧತೆ ನಡೆಸಿದ್ದರು ಅಷ್ಟರಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಸ್ಥಳೀಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.