ಕಾರವಾರ: ಗೋ ಸಾಗಾಣಿಕೆದಾರರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಿಜೆಪಿ ಮುಖಂಡ ಸೂರಜ್ ನಾಯ್ಕ್ ಸೋನಿಯನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 7ರಂದು ಅನ್ಯಕೋಮಿನ ಮೂರು ಜನರು ಜಾನುವಾರುವನ್ನು ಹೊನ್ನಾವರದ ಮೂಲಕ ಭಟ್ಕಳಕ್ಕೆ ಸಾಗಿಸುತ್ತಿದ್ದರು. ಈ ವೇಳೆ ಅವರನ್ನು ಹಿಡಿದು ಥಳಿಸಿ ಪೊಲೀಸರಿಗೆ ನೀಡಿದ್ದರು. ನಂತರ ಈ ಘಟನೆಯಲ್ಲಿ ಸೂರಜ್ ನಾಯ್ಕ ಸೋನಿ ಸೇರಿದಂತೆ 127 ಜನರ ಮೇಲೆ ಹೊನ್ನಾವರ ಪೊಲೀಸರು ಕಲಂ 307ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
Advertisement
Advertisement
ಮೊದಲಿಗೆ ಏಳು ಜನರನ್ನು ಪೊಲೀಸರು ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡ ಸೂರಜ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿದ್ದ ವೇಳೆ ನಿಜಾಮುದ್ದಿನ್ ರೈಲ್ವೆ ನಿಲ್ದಾಣದಲ್ಲಿ ದೆಹಲಿ ಹಾಗೂ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.
Advertisement
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸೂರಜ್ ಸೋನಿ ಈ ಬಾರಿ ಕೂಡ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹೊನ್ನಾವರ, ಕುಮಟಾದಲ್ಲಿ ನಡೆದ ಕೋಮುಗಲಭೆಯಲ್ಲಿ ಪ್ರಮುಖ ಆರೋಪಿಯೂ ಆಗಿದ್ದಾರೆ. ಈ ಹಿಂದೆ ಚಂದಾವರದಲ್ಲಿ ನಡೆದ ಕೋಮು ಗಲಭೆಯಲ್ಲಿ ಇವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು.