– ಐತಿಹಾಸಿಕ ಕ್ಷಣಕ್ಕೆ ಮೋದಿ, ಶಾ, ಎನ್‌ಡಿಎ ಆಡಳಿತ ರಾಜ್ಯಗಳ 20 ಸಿಎಂಗಳು ಸಾಕ್ಷಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಪ್ರಮಾಣ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್‌ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಸಾಕ್ಷಿಯಾದರು.
#WATCH | Kolkata, West Bengal | Prime Minister Narendra Modi congratulates West Bengal CM Suvendu Adhikari and members of the cabinet of the West Bengal government pic.twitter.com/FUWKvL23ux
— ANI (@ANI) May 9, 2026
ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.
ಇನ್ನೂ ಪಟ್ಟಾಭಿಷೇಕ ಸಮಾರಂಭಕ್ಕೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಜನ್ಮ ವಾರ್ಷಿಕೋತ್ಸವದ ಅಂಗವಾಗಿ ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
#WATCH | Kolkata | BJP leader Dilip Ghosh takes oath as a minister in the West Bengal government pic.twitter.com/K7MBBkSpW9
— ANI (@ANI) May 9, 2026
‘ಜೈಂಟ್ ಕಿಲ್ಲರ್’ ಸುವೇಂದು ಅಧಿಕಾರಿ
ಮೂಲತಃ ನಂದಿಗ್ರಾಮ ಚಳವಳಿಯ ಮೂಲಕ ಜನನಾಯಕರಾಗಿ ಹೊರಹೊಮ್ಮಿದ ಸುವೇಂದು ಅಧಿಕಾರಿ, ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಅವರ ಬಲಗೈ ಬಂಟನಾಗಿದ್ದವರು. ನಂತರ ಬಿಜೆಪಿ ಸೇರಿ ಬಂಗಾಳದಾದ್ಯಂತ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಯಶಸ್ವಿಯಾದರು. ಇವರ ಸಂಘಟನಾ ಚಾತುರ್ಯವನ್ನು ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದರು.
`ಸೋಲಿಲ್ಲದ ಸರದಾರ’ ಎನಿಸಿಕೊಂಡಿದ್ದ ಮಮತಾ ಬ್ಯಾನರ್ಜಿ ಅವರಿಗೆ ಅವರದ್ದೇ ನೆಲದಲ್ಲಿ ಸೋಲುಣಿಸಿದ ಸುವೇಂದು ಅಧಿಕಾರಿ, ಈಗ ‘ಸೋನಾರ್ ಬಾಂಗ್ಲಾ’ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ ಗಳಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಇನ್ನೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) 80 ಸ್ಥಾನಗಳನ್ನು ಗೆದ್ದಿದೆ.

