ಕೋಲ್ಕತ್ತಾ: ದುಷ್ಕರ್ಮಿಗಳ ತಂಡವೊಂದು ಬಿಜೆಪಿ ಮುಖಂಡರೊಬ್ಬರನ್ನು ಕಾರಿನಿಂದ ಎಳೆದು ತಳ್ಳಾಡಿ ಹಲ್ಲೆ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದ ಬಂಕುರಾ ಎಂಬಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ನಡೆದಿದ್ದು, ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ ವೈರಲ್ ಆಗಿದೆ.
ಏನಿದು ಘಟನೆ: ಮೇ 1,3 ಮತ್ತು 5ರಂದು ಪಂಚಾಯತ್ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಮುಖಂಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಇವರ ಮೇಲೆ ದಾಳಿ ಮಾಡಿದೆ. ಈ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.
ವಿಡಿಯೋದಲ್ಲೇನಿದೆ?: ದುಷ್ಕರ್ಮಿಗಳು ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಸ್ಕಾರ್ಪ್ ಹಾಕಿಕೊಂಡು ಏಕಾಏಕಿ ಬಿಜೆಪಿ ಮುಖಂಡ ಇದ್ದ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಕಾರಿನ ಕಿಟಿಕಿ ಗಾಜು ಒಡೆದು ಜಖಂಗೊಳಿಸಿ ಬಳಿಕ ಕಾರೊಳಗಿದ್ದ ಮುಖಂಡನನ್ನು ಹೊರಗೆಳೆದು ಹಿಗ್ಗಾಮುಗ್ಗವಾಗಿ ಥಳಿಸುವುದನ್ನು ಕಾಣಬಹುದು.
ಇದೀಗ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಗರು ತಮ್ಮ ಆಕ್ರೋಶ ಹೊರಹಾಕಿದ್ದು, ತೃಣಮೂಲ ಕಾಂಗ್ರೆಸ್ ನವರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ರೆ ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಈ ಆರೋಪವನ್ನು ತಳ್ಳಿ ಹಾಕಿದೆ.
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು, ತಮ್ಮ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಿದರೆ ತೃಣಮೂಲವು ಅನುಮತಿಸುವುದಿಲ್ಲ ಎಂದು ತಿಳಿಸಿದೆ. ಅದಾಗ್ಯೂ, ವಿರೋಧ ಪಕ್ಷಗಳು ಹಲವು ನಾಮಪತ್ರಗಳನ್ನು ಮಾಡಿವೆ ಎಂದು ತೃಣಮೂಲ ಹೇಳಿದೆ ಎಂಬುದಾಗಿ ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ.
#WATCH Bankura: BJP State Secretary Shyamapada Mondal attacked, allegedly by TMC workers. #WestBengal pic.twitter.com/RSgwJbHYCp
— ANI (@ANI) April 6, 2018