– ಹೇಳಿಕೆ ವಿವಾದಕ್ಕೀಡಾದ ನಂತ್ರ ವಿಷಾದವ್ಯಕ್ತಪಡಿಸಿದ ಮಾಜಿ ಸಿಎಂ
ಭೋಪಾಲ್: ಅಧಿಕಾರಿಗಳು ಇರುವುದೇ ನಮ್ಮ ಚಪ್ಪಲಿ ಎತ್ತಿಕೊಳ್ಳಲು ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವೆ ಉಮಾಭಾರತಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಉಮಾ ಭಾರತಿ ಅವರ ಈ ವಿವಾದಾತ್ಮಕ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಅಧಿಕಾರಿಗಳು ಏನೂ ಅಲ್ಲ, ಅವರು ಇರುವದೇ ನಮ್ಮ ಚಪ್ಪಲ್‍ಗಳನ್ನು (ಚಪ್ಪಲಿ) ತೆಗೆದುಕೊಳ್ಳಲು. ನಾನು 11 ವರ್ಷಗಳ ಕಾಲ ಅಧಿಕಾರದಲ್ಲಿದ್ದೇನೆ, ಮಧ್ಯ ಪ್ರದೇಶ ಸಿಎಂ ಆಗಿ ಮತ್ತು ನಂತರ ಕೇಂದ್ರ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅಧಿಕಾರಶಾಹಿ ಎಂದರೆ ಏನು ಎಂದು ನನಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ.
Advertisement
ब्यूरोक्रेसी कुछ नहीं होती,चप्पल उठाने वाली होती है..चप्पल उठाती है हमारी @umasribharti का बयान @ndtv @ndtvindia @manishndtv@GargiRawat @sanket @alok_pandey@vinodkapri pic.twitter.com/IRBQNA9vVe
— Anurag Dwary (@Anurag_Dwary) September 20, 2021
Advertisement
ನಾವು(ರಾಜಕಾರಣಿಗಳು) ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಅದರ ನಂತರವೇ ಫೈಲ್ ಪ್ರಕ್ರಿಯೆಗೆ ಮುಂದಾಗುತ್ತದೆ ಎಂದು ಉಮಾ ಭಾರತಿ ಅವರು ಶನಿವಾರ ಭೋಪಾಲ್ ನ ತಮ್ಮ ನಿವಾಸದಲ್ಲಿ ಒಬಿಸಿ ನಿಯೋಗದೊಂದಿಗೆ ನಡೆದ ಸಂವಾದದಲ್ಲಿ ಹೇಳಿದ್ದಾರೆ. ವಿವಾದಾತ್ಮಕ ಹೇಳಿಕೆಯ ವೀಡಿಯೋ ಸೋಮವಾರ ವೈರಲ್ ಆಗಿದ್ದು, ತಮ್ಮ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದಂತೆ ಬಿಜೆಪಿ ನಾಯಕಿ ವಿಷಾದ ವ್ಯಕ್ತಪಡಿಸಿದ್ದಾರೆ.
Advertisement
१) परसों भोपाल में मेरे निवास पर पिछड़े वर्गों का एक प्रतिनिधि मण्डल मुझे मिला । यह मुलाक़ात औपचारिक नही थी । उस पूरी बातचीत का विडीओ मीडिया में वायरल हुआ है ।
— Uma Bharti (@umasribharti) September 20, 2021
Advertisement
ನನ್ನ ಉದ್ದೇಶಗಳು ಒಳ್ಳೆಯದಾಗಿದ್ದರೂ ಅಸಮಂಜಸವಾದ ಭಾಷೆ ಬಳಸಿದ್ದಕ್ಕಾಗಿ ನಾನು ವಿಷಾದಿಸುತ್ತೇನೆ. ನನ್ನ ಅನುಭವದಿಂದ, ಪ್ರಾಮಾಣಿಕ ಅಧಿಕಾರಶಾಹಿ ಯಾವಾಗಲೂ ಬಲವಾದ ಮತ್ತು ಪ್ರಾಮಾಣಿಕ ರಾಜಕಾರಣಿಗಳಿಗೆ ಉತ್ತಮ ಕಂಪನಿ ನೀಡುತ್ತದೆ ಎಂದು ಹೇಳಬಲ್ಲೆ ಎಂದು ಉಮಾಭಾರತಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಐವರ ಡೆತ್ ಸೀಕ್ರೆಟ್ – ‘ಹಾಳಾಗ್ ಹೋಗ್ರಿ’ ಅಂದಿದ್ದಕ್ಕೇ ಆತ್ಮಹತ್ಯೆನಾ..?
ಉಮಾ ಭಾರತಿ ಹೇಳಿಕೆ ನಾಚಿಕೆಗೇಡು ಎಂದು ಟೀಕಿಸಿರುವ ಕಾಂಗ್ರೆಸ್, ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದೆ.