ಸುಮಲತಾಗೆ ಟಿಕೆಟ್ ನೀಡಿದ್ರೆ ಮಂಡ್ಯ ಗೆಲುವು ಸುಲಭ – ಅಮಿತ್ ಶಾ ಎದುರು ಬಿಜೆಪಿ ನಾಯಕರ ಬ್ಯಾಟಿಂಗ್

Public TV
2 Min Read
BJP 2

– ಮೈತ್ರಿ ಧರ್ಮ ಪಾಲಿಸಿ, ಸಂಘಟನೆಗೆ ಒತ್ತು ನೀಡುವಂತೆ ಶಾ ವಾರ್ನಿಂಗ್

ಮಂಡ್ಯ: ಈಗಾಗಲೇ 2024ರ ಲೋಕಸಭಾ ಚುನಾವಣೆಗೆ (Lok Sabha Elections) ಸಿದ್ಧತೆ ನಡೆಸಿರುವ ಬಿಜೆಪಿ ಸತತ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಭರ್ಜರಿ ತಾಲೀಮು ನಡೆಸಿದೆ.

ಅದರಲ್ಲೂ ಕಾಂಗ್ರೆಸ್ (Congress) ಆಡಳಿತದಲ್ಲಿರುವ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಗೆಲುವಿನೊಂದಿಗೆ ಅತಿಹೆಚ್ಚು ಲೀಡ್ ಗಳಿಸುವತ್ತ ನಿಗಾ ವಹಿಸಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಹೆಚ್ಚಿನ ಲೀಡ್‌ನೊಂದಿಗೆ ಗೆಲುವು ಸಾಧಿಸುವತ್ತ ಗಮನ ಹರಿಸುವಂತೆ ಪಕ್ಷದ ವರಿಷ್ಠರಿಗೆ ಸೂಚನೆ ನೀಡಿದ್ದಾರೆ.

BJP 1

ಸುಮಲತಾ ಪರ ಬ್ಯಾಟಿಂಗ್:
ಭಾನುವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹೈವೋಲ್ಟೇಜ್ ಕಣವಾಗಿರುವ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡದಂತೆ ಕೆಲ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ಪ್ರಸಂಗವೂ ಕೇಳಿಬಂದಿದೆ. ಹಾಲಿ ಸಂಸದೆ ಸುಮಲತಾ (umalatha Ambareesh) ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬ ಸಲಹೆಗಳೂ ಕೇಳಿಬಂದಿವೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ರಾಜ್ಯದ ನಾರಾಯಣ ಕೃಷ್ಣನಾಸ ಭಾಂಡಗೆಗೆ ಬಿಜೆಪಿ ಟಿಕೆಟ್‌

SUMALATHA AMBAREESH

ಸುಮಲತಾ ಅಂಬರೀಶ್ ಅವರಿಗೆ ಜಿಲ್ಲೆಯಲ್ಲಿ ಒಳ್ಳೆಯ ಹೆಸರು ಇದೆ. ಅವರಿಗೆ ಮೈತ್ರಿ (BJP-JDS Alliance) ಟಿಕೆಟ್ ನೀಡಿದ್ರೆ ಗೆಲುವು ಸುಲಭ. ಹಾಗಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದಂತೆ ಪಟ್ಟು ಹಿಡಿದಿದ್ದಾರೆ. ಇದೆಲ್ಲವನ್ನು ಸಮಾಧಾನವಾಗಿಯೇ ಕೇಳಿಸಿಕೊಂಡ ಅಮಿತ್ ಶಾ ಅವರು ನೀವು ಕೂತಲ್ಲಿ ನಿಂತಲ್ಲಿ ನಿಮ್ಮ ಅಭಿಪ್ರಾಯ ಹೇಳಬೇಡಿ. ನಿಮ್ಮ ಮಾತಿನಿಂದ ಮೈತ್ರಿ ಧರ್ಮಕ್ಕೆ ಚೂರು ಧಕ್ಕೆಯಾದರೂ ನಾವು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮೈತ್ರಿ ಧರ್ಮ ಪಾಲಿಸಿ: ಬಿಜೆಪಿ ನಾಯಕರಿಗೆ ಅಮಿತ್‌ ಶಾ ಸೂಚನೆ

ನಿಮ್ಮ ಅಭಿಪ್ರಾಯ ಹೇಳೋದನ್ನು ಬಿಟ್ಟು ಕೊಟ್ಟಿರುವ ಟಾಸ್ಕ್ ಮಾಡಿ, ಇನ್ನೂ 15 ದಿನಗಳಲ್ಲಿ ಅಭ್ಯರ್ಥಿ ಘೋಷಣೆಯಾಗುತ್ತೆ. ಮೈತ್ರಿ ಸಂಘಟನೆಗೆ ಒತ್ತು ನೀಡಿ ಎಂದು ಮಂಡ್ಯದ ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ಪತ್ತೆಯಾದ ವಿಷ್ಣು ವಿಗ್ರಹ ಪ್ರಾಚ್ಯ ವಸ್ತುಸಂಗ್ರಹಾಲಯಕ್ಕೆ ಸ್ಥಳಾಂತರ

Share This Article