– ಮಾಜಿ ಶಾಸಕ ಎಸ್ವಿ ರಾಮಚಂದ್ರಪ್ಪ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ
ದಾವಣಗೆರೆ: ಬರ ಪೀಡಿತ ತಾಲೂಕು (Drought Hit Taluk) ಪಟ್ಟಿಯಿಂದ ಜಗಳೂರು (Jagalur) ತಾಲೂಕು ಕೈ ಬಿಟ್ಟ ಹಿನ್ನೆಲೆ ಇಂದು ಜಗಳೂರು ಬಂದ್ಗೆ ಬಿಜೆಪಿ (BJP) ನಾಯಕರು ಕರೆ ನೀಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಜಗಳೂರು ಬಂದ್ಗೆ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ಗೆ ಕರೆ ನೀಡಲಾಗಿದೆ. ಬಿಜೆಪಿ ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರಪ್ಪ, ಹೆಚ್ಪಿ ರಾಜೇಶ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಜಗಳೂರು ಬಂದ್ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಎರಡೂ ಪಟ್ಟಿಗಳಲ್ಲಿ ಜಗಳೂರು ತಾಲೂಕನ್ನು ಸೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳ, ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಷ್ಯಾ ದಾಳಿಗೆ ಉಕ್ರೇನ್ನ 8 ನಾಗರಿಕರ ಸಾವು

ಇನ್ನು ಬಂದ್ ಹಿನ್ನೆಲೆ ಜಗಳೂರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದು, ಕೇವಲ ಎಮರ್ಜೆನ್ಸಿ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ರಸ್ತೆಗಳಿಗೆ ಮರದ ದಿಮ್ಮಿಗಳನ್ನು ಇಟ್ಟು ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆ ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: Tumakuru | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೋಲೀಸರು ಮುಂದಾಗಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ನಡೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಎಸ್ವಿ ರಾಮಚಂದ್ರಪ್ಪ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಕರೆದೊಯ್ಯವ ವೇಳೆ ಕಾರ್ಯಕರ್ತರು ಬಸ್ ಗ್ಲಾಸ್ ಒಡೆದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಬಸ್ ಗ್ಲಾಸ್ ಪೊಲೀಸ್ ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಇದನ್ನೂ ಓದಿ: ತಮಿಳುನಾಡಿಗೆ ನಿರಂತರ ಕಾವೇರಿ ಹರಿವು – ಬರಿದಾಗುತ್ತಿವೆ ಜಲಾಶಯಗಳು

