– ಜನರ ಮನೆಯಲ್ಲಿ ಕ್ಷೀರ ಉಕ್ಕೋದನ್ನ ಕ್ಷೀಣಿಸಲು ಹಾಲು ದರ ಉಕ್ಕಿಸಿದೆ – ವಿಜಯೇಂದ್ರ
ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ. ಪ್ರತಿ ಲೀಟರ್ ಪ್ಯಾಕೆಟ್ ಹಾಲಿನ ದರವನ್ನು 2.10 ರೂ. ನಷ್ಟು ಹೆಚ್ಚಿಸಿದೆ (Nandini Milk Price Hike). ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು (BJP Leaders) ಮುಗಿಬಿದ್ದಿದ್ದಾರೆ. ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಬೆಲೆ ಏರಿಕೆ ಕೊಡುಗೆ ನೀಡಿದ್ದು, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ತಮ್ಮ ಸೋಷಿಯಲ್ ಮೀಡಿಯಾ X ಖಾತೆಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಬಿ.ವೈ ವಿಜಯೇಂದ್ರ (BY Vijayendra)
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress GovernMent) ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.
Advertisement
Advertisement
ಆರ್. ಅಶೋಕ್ (R Ashoka)
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂ. ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.
Advertisement
Advertisement
ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ.
ಬಿಜೆಪಿ ಕರ್ನಾಟಕ (BJP Karnataka):
ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೇ ಭಂಡತನ ತೋರಿದ ಕಾಂಗ್ರೆಸ್ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ 2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ. ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.
ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2.10 ರೂ. ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ. pic.twitter.com/hDsHMEA7xI
— Sunil Kumar Karkala (@karkalasunil) June 25, 2024
ಸುನಿಲ್ ಕುಮಾರ್ (Sunil Kumar):
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೈಲ್ ಉತ್ಪನ್ನಗಳ ಸೆಸ್ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಈಗ ಹಾಲಿನ ಬೆಲೆ ಏರಿಕೆ ಮಾಡಿದೆ.
ಜೆಡಿಎಸ್:
ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಬಂಪರ್ ಕೊಡುಗೆ ಕೊಟ್ಟಿದೆ. ಈ ದರ ಏರಿಕೆ ಲಾಭ ಹಾಲು ಉತ್ಪಾದಕರಿಗೆ ಸಿಗಲಿದೆಯೋ ಅಥವಾ ಕೆಎಂಎಫ್ ಜೋಳಿಗೆ ಹೋಗಲಿದೆಯೋ? ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ.