ರಾಮಮಂದಿರ ಟ್ರಸ್ಟ್ ಭೂ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿ – ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ

Advertisements

ನವದೆಹಲಿ : ಮರ್ಯಾದ ಪುರುಷೋತ್ತಮ ಶ್ರೀರಾಮ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

Advertisements

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬಾರಿ ಬೆಲೆಗೆ ಶ್ರೀರಾಮ ಮಂದಿರ ನಿರ್ಮಾಣ ಟ್ರಸ್ಟ್ ಭೂಮಿ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.

Advertisements

ಶ್ರೀರಾಮ ಮಂದಿರ ನಿರ್ಮಾಣ ಘೋಷಣೆ ಬಳಿಕ ದೇವಸ್ಥಾನದ ಸುತ್ತಲಿನ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಬಿಜೆಪಿ ನಾಯಕರು, ಅಧಿಕಾರಿಗಳು ಟ್ರಸ್ಟ್ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಭಾರೀ ಬೆಲೆಗೆ ಭೂಮಿ ಮಾರಾಟ ಮಾಡುತ್ತಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

ರಾಮ ಮಂದಿರ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಭೂಮಿಯನ್ನು ಬಿಜೆಪಿ ನಾಯಕರು ಖರೀದಿ ಮಾಡಿದ್ದಾರೆ. ಹೀಗೆ ಕಡಿಮೆ ಬೆಲೆಯಲ್ಲಿ ಕೊಂಡುಕೊಂಡ ಭೂಮಿಯನ್ನು ರಾಮ ಮಂದಿರ ನಿರ್ಮಾಣ ಟ್ರಸ್ಟ್ ದೇಣಿಗೆಯ ಹಣದಿಂದ ದುಬಾರಿ ಬೆಲೆಗೆ ಕೊಂಡುಕೊಂಡಿದೆ. ಈ ಮಾರಾಟ ಪ್ರಕ್ರಿಯೆಗಳೂ ಸಹ ಕೆಲವೇ ನಿಮಿಷಗಳ ಅಂತರದಲ್ಲಿ ನಡೆದಿದ್ದು ಭಾರೀ ಭ್ರಷ್ಟಾಚಾರ ನಡೆದಿರುವ ಸುಳಿವು ನೀಡುತ್ತಿದೆ ಎಂದು ದಾಖಲೆಗಳ ಸಮೇತ ಗಂಭೀರ ಆರೋಪ ಮಾಡಿದರು.

Advertisements

ಮಂದಿರದ ಆವರಣದ ಸುತ್ತ ನಡೆದಿರುವ ಅಕ್ರಮ ಭೂ ವ್ಯವಹಾರದಲ್ಲಿ ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಭಾಗಿಯಾಗಿದ್ದಾರೆ. ಇವರ ಸಹಾಯದಿಂದ ಸುತ್ತಲಿನ ಮಾರಾಟವಾಗದ ದಲಿತರ ಭೂಮಿಯನ್ನು ಕಬಳಿಸಲಾಗಿದೆ. ಒಂದೇ ಜಮೀನಿನ ಎರಡು ಭಾಗಗಳು ಕೆಲವೇ ನಿಮಿಷಗಳಲ್ಲಿ ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿವೆ. ಸೇಲ್ ಡೀಡ್‍ನಲ್ಲಿ ಆರ್‌ಎಸ್‌ಎಸ್‌ ಮುಖಂಡ ಮತ್ತು ರಾಮಮಂದಿರದ ಟ್ರಸ್ಟಿ ಅನಿಲ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಸಾಕ್ಷಿಗಳ ಸಹಿ ಇದೆ ಎಂದು ಹೇಳಿದರು. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

ಕೆಲವು ಭೂಮಿ ಮಾರಾಟದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕಾ, ಭೂಮಿಯೊಂದು ಒಬ್ಬರಿಂದ ಇನ್ನೊಬ್ಬರಿಗೆ 19 ನಿಮಿಷದಲ್ಲಿ ವರ್ಗವಾಗಿದೆ, ಇದಾದ ಬಳಿಕ 5 ನಿಮಿಷದಲ್ಲಿ ಮತ್ತೊಬ್ಬರ ಹೆಸರಿಗೆ ನೊಂದಣಿಯಾಗಿದೆ. 2 ಕೋಟಿಗೆ ಖರೀದಿಸಿದ ಜಮೀನನ್ನು 19 ನಿಮಿಷದಲ್ಲಿ 8 ಕೋಟಿಗೆ ಟ್ರಸ್ಟ್ ಖರೀದಿ ಮಾಡಿದೆ. ಈ ಲೆಕ್ಕದ ಪ್ರಕಾರ ಅಯೋಧ್ಯೆಯಲ್ಲಿ ಪ್ರತಿ ಸೆಕೆಂಡ್‍ಗೆ ಜಮೀನಿನ ಬೆಲೆ 5 ಲಕ್ಷ ರೂಪಾಯಿ ಏರಿಕೆಯಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ದಲಿತರಿಂದ 20 ಲಕ್ಷಕ್ಕೆ ಜಮೀನು ತೆಗೆದುಕೊಂಡು, ಟ್ರಸ್ಟ್ ಗೆ ಒಂದೂವರೆ ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪದಾಧಿಕಾರಿಗಳು ಮತ್ತು ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಗಳು ರಾಮಮಂದಿರದ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಸತ್ಯ ಮತ್ತು ಪ್ರಾಮಾಣಿಕತೆಯ ಪ್ರತೀಕವಾಗಿದ್ದ ರಾಮನ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸುವ ಮೂಲಕ ಬಿಜೆಪಿ ಸರ್ಕಾರ ಇಡೀ ರಾಷ್ಟ್ರದ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಜಾಹೀರಾತಿನಲ್ಲಿ ಸಹಾಯವಾಣಿ ನಂಬರ್ ತಪ್ಪಾಗಿದ್ದಕ್ಕೆ ಮಹಿಳೆಗೆ ಎಡಬಿಡದೇ ಬಂತು 4,500 ಫೋನ್‌ ಕಾಲ್‌!

ಅಯೋಧ್ಯೆಯ ಉದ್ದೇಶಿತ ರಾಮಮಂದಿರದ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಭೂಮಿ ಖರೀದಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಸರ್ಕಾರ ಬುಧವಾರ ತನಿಖೆಗೆ ಆದೇಶಿಸಿದೆ. ಅಯೋಧ್ಯೆಯ ಜಿಲ್ಲಾಧಿಕಾರಿ ಈ ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಅವರು ಮೇಯರ್ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ. ಸುಪ್ರೀಂಕೊರ್ಟ್ ಆದೇಶದ ಆಧಾರದ ಮೇಲೆ ಟ್ರಸ್ಟ್ ರಚಿಸಲಾಗಿದೆ. ಹೀಗಾಗಿ, ಹೈಕೋರ್ಟ್‍ನಿಂದಲೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Advertisements
Exit mobile version