ಇಂದಿನಿಂದ ಬಿಜೆಪಿ ನಾಯಕರ ಪ್ರವಾಸ

Public TV
1 Min Read
BJP TOUR

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇವತ್ತಿನಿಂದ ಆಗಸ್ಟ್ 16 ರವರೆಗೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.

ಇದೇ ಆಗಸ್ಟ್ 13 ರಂದು ಬೀದರ್ ನಲ್ಲಿ ಜನಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ. ಅದಕ್ಕೂ ಮೊದಲೇ ಇವತ್ತಿನಿಂದ 3 ತಂಡಗಳಲ್ಲಿ ಬಿಜೆಪಿ ನಾಯಕರು ರಾಜ್ಯ ಪ್ರವಾಸವನ್ನು ಆರಂಭಿಸಲಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ ಸಿದ್ಧತೆ- 3 ತಂಡಗಳಲ್ಲಿ ಬಿಜೆಪಿ ನಡೆಸಲಿದೆ ರಾಜ್ಯ ಪ್ರವಾಸ

BSY 1

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ನೇತೃತ್ವದ ಪ್ರತ್ಯೇಕ ಮೂರು ತಂಡಗಗಳು 8 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ಪ್ರವಾಸದ ವೇಳೆ ಆಯಾ ಜಿಲ್ಲೆಯ ಕೋರ್ ಕಮಿಟಿ ಮೀಟಿಂಗ್, ಸ್ಥಳಿಯ ಸಂಸ್ಥೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಲಿದ್ದಾರೆ. ಜೊತೆಗೆ ಪ್ರತಿ ಜಿಲ್ಲೆಯಲ್ಲಿ ಶಕ್ತಿ ಕೇಂದ್ರದ ಸದಸ್ಯರ ಮೇಲ್ಪಟ್ಟವರ ಸಭೆಯೂ ನಡೆಯಲಿದೆ.

ಸಭೆಯಲ್ಲಿ 1000 ಸದಸ್ಯರು ಭಾಗಿಯಾಗುತ್ತಾರೆ. ಅಷ್ಟೇ ಅಲ್ಲದೇ ಪ್ರತಿ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೀದರ್ ನಿಂದ ಯಡಿಯೂರಪ್ಪ ಇಂದು ಪ್ರವಾಸಕ್ಕೆ ಚಾಲನೆ ನೀಡಲಿದ್ದು, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಯಡಿಯೂರಪ್ಪ ಪ್ರವಾಸ ನಡೆಸಲಿದ್ದಾರೆ. ಮಧ್ಯ ಕರ್ನಾಟಕದಲ್ಲಿ ಜಗದೀಶ್ ಶೆಟ್ಟರ್, ಮೈಸೂರು ಭಾಗದಲ್ಲಿ ಈಶ್ವರಪ್ಪರ ತಂಡ ಪ್ರವಾಸ ಕೈಗೊಳ್ಳಲಿದೆ.

Share This Article
Leave a Comment

Leave a Reply

Your email address will not be published. Required fields are marked *