ಗದಗ: ಜನರನ್ನು ಭಾವಾನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.
ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಪಾಟೀಲ್, ಜನರನ್ನು ಭಾವಾನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡಿದ್ದಾರೆ. ಗುಜರಾತ್ ನಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಶೇ.30 ರಷ್ಟು ಮತಗಳಿಕೆ ಹೆಚ್ಚಿಸಿಕೊಂಡಿದೆ ಎಂದು ಹೇಳಿದರು.
Advertisement
Advertisement
ಪ್ರಚಾರದ ಭರಾಟೆಯಲ್ಲಿ ಮೋದಿ ಸಣ್ಣತನಕ್ಕೆ ಇಳಿದು ಪ್ರಧಾನಿ ಸ್ಥಾನಕ್ಕೆ ಅಗೌರವ ತಂದಿದ್ದರು. ಗುಜರಾತ್ ನಲ್ಲಿ ಕಾಂಗ್ರೆಸ್ ಬೆಳವಣಿಗೆಗೆ, ಅಸ್ತಿತ್ವಕ್ಕೆ ಕಾಂಗ್ರೆಸ್ ಪಕ್ಷದ ನೂತನ ಸಾರಥಿ ರಾಹುಲ್ ಗಾಂಧಿ ಕಾರಣರಾಗಿದ್ದಾರೆ. ಗುಜರಾತ್ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಮಾಡುವ ಬಿಜೆಪಿ ಮುಖಂಡರಿಗೆ ನಿರಾಶೆಯಾಗಿದೆ ಎಂದರು.
Advertisement
ಗುಜರಾತ್ ನಲ್ಲಿಯೇ ಕಾಂಗ್ರೆಸ್ ದೊಡ್ಡ ಶಕ್ತಿಯಾಗಿದೆ. ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಿ ಕಾಂಗ್ರೆಸ್‍ಗೆ ವಿಶೇಷ ಬಲ ಬರಲಿದೆ. ಹಿಮಾಚಲ ಪ್ರದೇಶದಲ್ಲಿ ಸೋತಿದ್ದೇವೆ. ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೀವಿ ಎಂದು ಎಚ್.ಕೆ.ಪಾಟೀಲ್ ಹೇಳಿದರು.
Advertisement