-ಸಿಎಲ್‍ಪಿ ಸಭೆಗೆ ಹೋಗಲ್ಲವೆಂದು ರೆಡ್ಡಿ ಸ್ಪಷ್ಟನೆ
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಯೂಟರ್ನ್ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಅವರು ಅಲರ್ಟ್ ಆಗಿದ್ದು, ತಕ್ಷಣ ರಾಮಲಿಂಗಾರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ.
ರಾಮಲಿಂಗಾರೆಡ್ಡಿ ಯೂಟರ್ನ್ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಮಾಜಿ ಮೇಯರ್ ನಟರಾಜ್ ಭೇಟಿ ನೀಡಿದ್ದಾರೆ. ಇವರ ಜೊತೆಗೆ ರಾಮಲಿಂಗಾ ರೆಡ್ಡಿ ಜೊತೆ ಮಾತುಕತೆ ನಡೆಸಿದ್ದಾರೆ.
Advertisement
Advertisement
ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ವಿಶ್ವನಾಥ್, ರೆಡ್ಡಿ ಜನಾಂಗದ ಚುನಾವಣೆ ಸಂಬಂಧ ಮಾತುಕತೆಗೆ ಬಂದಿದ್ದೇವೆ. ರಾಜಕೀಯದ ಬಗ್ಗೆ ಮಾತನಾಡಲು ಬಂದಿಲ್ಲ. ಆಪರೇಷನ್ ಮಾಡಲು ರಾಮಲಿಂಗಾರೆಡ್ಡಿ ಅವರನ್ನ ಆಗಲ್ಲ. ಶಾಸಕರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮುಂದೆ ಕಾದು ನೋಡಿ. ನಾನು ಯಾವ ಸಂದೇಶ ಹೊತ್ತು ತಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ರಾಮಲಿಂಗಾರೆಡ್ಡಿ ಅವರು ಸಿಎಲ್‍ಪಿ ಸಭೆಗೆ ಹೋಗುವುದಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಇತ್ತ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ಸಿನಲ್ಲೇ ಉಳಿಯಬೇಕು. ಹೀಗಾಗಿ ಅವರು ರಾಜೀನಾಮೆ ವಾಪಸ್ ಪಡೆದುಕೊಳ್ಳಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಕಾರ್ಯಕರ್ತರು ಅವರ ಮನೆಯ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.
Advertisement
ಸೋಮವಾರ ಎಐಸಿಸಿ ನಾಯಕಿ ಸೋನಿಯಾ ಗಾಂಧಿಯವರನ್ನು ರಾಮಲಿಂಗಾರೆಡ್ಡಿ ಪುತ್ರಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಭೇಟಿ ಮಾಡಿದ ಬಳಿಕ ಈ ಬಗ್ಗೆ ಸುದ್ದಿ ಹರಿದಾಡುತ್ತಿತ್ತು. ಸೋನಿಯಾ ಗಾಂಧಿ ಸಲಹೆ ಮೇರೆಗೆ ಶಾಸಕಿ ಸೌಮ್ಯಾ ರೆಡ್ಡಿ ಕೂಡ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್‍ನಲ್ಲೇ ರಾಜಕಾರಣ ಮಾಡುತ್ತಾ ಬಂದಿರುವ ರಾಮಲಿಂಗಾರೆಡ್ಡಿಗೆ ಪಕ್ಷ ಬಿಡುವ, ಬಿಜೆಪಿ ಸೇರುವ ಮನಸ್ಸಿಲ್ವಾ ಎಂಬ ಪ್ರಶ್ನೆ ಎದ್ದಿದೆ.