BellaryDistrictsKarnatakaLatestMain Post

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ನೇತ್ರತ್ವದಲ್ಲಿ ಚುನಾವಣೆ: ನಳಿನ್

ವಿಜಯನಗರ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕಳೆದ ತಿಂಗಳಲ್ಲಿ ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಯಶಸ್ವಿ ಮಾಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ನಳಿನ್ ಅವರು ಭಾಗವಾಯಿಸಿದ್ದರು. ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾರಿನಲ್ಲಿದ್ದ ಮೊಬೈಲ್ ಕದ್ದ – ಕರೆ ಮಾಡಿದ್ರೆ ಹಣಕ್ಕಾಗಿ ಬ್ಲಾಕ್ ಮೇಲ್ 

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಪಿಎಸ್‍ಎ ನೇಮಕದಲ್ಲಿ ಅಕ್ರಮ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಆರೋಪಿಗಳನ್ನ ಬಂಧಿಸಿದೆ. ಎಷ್ಟೇ ದೊಡ್ಡವರಿದ್ರು, ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಇನ್ನು ನಮ್ಮ ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಕಾಂಗ್ರೆಸ್ ಅವರ ಆಡಳಿತದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಯಾವುದೇ ಹಗರಣಗಳ ಕುರಿತು ಕಾಂಗ್ರೆಸ್ ತನಿಖೆ ಮಾಡಿಲ್ಲ. ಹೀಗಾಗಿ ಬಿಜೆಪಿ ಕುರಿತು ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

Leave a Reply

Your email address will not be published.

Back to top button