ಇಂದು ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌?

Public TV
1 Min Read
narendra modi amit shah

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election) ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಸಂಜೆ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡು ಮತ್ತು ಒಡಿಶಾ ಹೊರತುಪಡಿಸಿ ಉಳಿದ ರಾಜ್ಯಗಳ 170 ಕ್ಕೂ ಹೆಚ್ಚು ಹೆಸರುಗಳನ್ನು ಘೋಷಿಸಬಹುದು. ಇಂದು ಸಂಜೆ 6 ಗಂಟೆಗೆ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗುವುದು ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಜಕೀಯ ಕರ್ತವ್ಯದಿಂದ ನನ್ನನ್ನು ಮುಕ್ತಗೊಳಿಸಿ – ರಾಜಕೀಯ ನಿವೃತ್ತಿ ಸುಳಿವು ನೀಡಿದ ಗಂಭೀರ್‌

narendra modi jp nadda amit shah bl santosh bjp meeting

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇರುವ ಸಾಧ್ಯತೆ ಇದೆ. ದೆಹಲಿಯಲ್ಲಿ ಒಂದರ ಹಿಂದೆ ಒಂದರಂತೆ ಸಭೆ ನಡೆದ ಬಳಿಕ ಪ್ರಕಟವಾಗುತ್ತಿದೆ. ಬಿಜೆಪಿಯು ಎನ್‌ಡಿಎಯಲ್ಲಿ ಹೊಸ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಸಹ ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ನಡೆಸಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಸೇರಿದಂತೆ ಅದರ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು.

AMIT SHAH NARENDRA MODI

ಚುನಾವಣಾ ಆಯೋಗದ ಚುನಾವಣಾ ವೇಳಾಪಟ್ಟಿ ಘೋಷಣೆಗೂ ಮುನ್ನವೇ ಲೋಕಸಭೆ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಹೆಸರಿಸಲು ಆಡಳಿತ ಪಕ್ಷ ಮುಂದಾಗಿದೆ. ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್‌ನ ಭೂಪೇಂದ್ರ ಪಟೇಲ್, ಮಧ್ಯಪ್ರದೇಶದ ಮೋಹನ್ ಯಾದವ್, ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಮತ್ತು ಗೋವಾದ ಪ್ರಮೋದ್ ಸಾವಂತ್ ಸೇರಿದಂತೆ ವಿವಿಧ ರಾಜ್ಯಗಳ ನಾಯಕರು ಭಾಗವಹಿಸಿದ್ದರು. ರಾಜ್ಯ ನಾಯಕರು ಸಾಮಾನ್ಯವಾಗಿ ಸಿಇಸಿ ಸಭೆಯಲ್ಲಿ ತಮ್ಮ ರಾಜ್ಯಗಳ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿದಾಗ ಹಾಜರಾಗುತ್ತಾರೆ.

ಸಭೆಯಲ್ಲಿ ಭಾಗವಹಿಸಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರನ್ನು ವಿದಿಶಾದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಪಟ್ಟಿಯು ಉತ್ತರ ಪ್ರದೇಶದ 50 ಅಭ್ಯರ್ಥಿಗಳ ಹೆಸರುಗಳನ್ನು ಹೊಂದಿರಬಹುದು. ನಟಿ, ರಾಜಕಾರಣಿ ಹೇಮಾ ಮಾಲಿನಿ ಅವರು ಮಥುರಾದಿಂದ ಮತ್ತೆ ಕಣಕ್ಕಿಳಿಯುವ ಸಾಧ್ಯತೆ ಇದೆ.

Share This Article