ನವದೆಹಲಿ: ಪಕ್ಷದಲ್ಲಿದ್ದುಕೊಂಡೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದ ಶತ್ರುಘ್ನ ಸಿನ್ಹಾ ಅವರನ್ನು ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸಿದೆ.
ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಸ್ಫರ್ಧಿಸುವ ಶತ್ರುಘ್ನ ಸಿನ್ಹಾ ಅವರ ವಿರುದ್ಧ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರನ್ನು ನಿಲ್ಲಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿಯ ಚುನಾವಣಾ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Advertisement
ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ. ಇತ್ತ ಶತ್ರುಘ್ನಾ ಸಿನ್ಹಾ ಅವರು ಪಕ್ಷೇತರ ಅಭ್ಯರ್ಥಿಯಾಗಿ, ಇಲ್ಲವೇ ಕಾಂಗ್ರೆಸ್-ಆರ್‍ಜೆಡಿ ಬೆಂಬಲ ಪಡೆದು ಸ್ಪರ್ಧಿಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
Advertisement
Actor-turned-politician Shatrughan Sinha, who is the sitting Member of Parliament from Patna Saheb parliamentary constituency in Bihar is likely to be replaced with Union Minister Ravi Shankar Prasad, according to sources
Read @ANI Story | https://t.co/BeCBWtToSf pic.twitter.com/uJpAbwxS1q
— ANI Digital (@ani_digital) March 17, 2019