– ಶೀಘ್ರದಲ್ಲೇ ಕರ್ನಾಟಕದ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆಯೂ ನಿರ್ಧಾರ
ನವದೆಹಲಿ: ಬಿಜೆಪಿ (BJP) ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಲು ಸಿದ್ಧತೆ ನಡೆಸುತ್ತಿದ್ದು, ಬಿಹಾರ ವಿಧಾನಸಭಾ ಚುನಾವಣೆ (Bihar Election) ಘೋಷಣೆಗೂ ಮುನ್ನ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿವೆ.
ಪಕ್ಷದ ಹೈಕಮಾಂಡ್ ಉನ್ನತ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಚಿಸಿದೆ. ಸೆ.9 ರಂದು ಉಪ ರಾಷ್ಟ್ರಪತಿ ಚುನಾವಣೆಯ ನಂತರ ಸಮಾಲೋಚನಾ ಪ್ರಕ್ರಿಯೆಯು ಪುನರಾರಂಭಗೊಳ್ಳಲಿದ್ದು, ನಂತರ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್: ಜೆಡಿಎಸ್ ಲೇವಡಿ
ರಾಷ್ಟ್ರೀಯ ಅಧ್ಯಕ್ಷರನ್ನು ಅಂತಿಮಗೊಳಿಸುವ ಮೊದಲು, ಉತ್ತರ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಂತಹ ಪ್ರಮುಖ ರಾಜ್ಯಗಳಲ್ಲಿ ಹೊಸ ರಾಜ್ಯ ಅಧ್ಯಕ್ಷರನ್ನು ನೇಮಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ದರ್ಶನ್ ಜೊತೆಗಿನ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ
ಜಾತಿ, ಪ್ರಾದೇಶಿಕ ಅಥವಾ ಸಾಮಾಜಿಕ ಸಮೀಕರಣಗಳಿಂದ ಆಯ್ಕೆಯಾಗುವುದನ್ನು ಪಕ್ಷದ ನಾಯಕತ್ವ ಬಯಸುವುದಿಲ್ಲ. ಬದಲಾಗಿ, ಹೊಸ ಅಧ್ಯಕ್ಷರು ಸಂಘಟನೆಯನ್ನು ಬಲಪಡಿಸುವತ್ತ ಗಮನಹರಿಸುವ ಮತ್ತು ಸಾಮರ್ಥ್ಯವಿರುವ ವ್ಯಕ್ತಿಯಾಗಿರಬೇಕು. ಈ ಹೆಸರು ಅಚ್ಚರಿ ಮೂಡಿಸುವ ಸಾಧ್ಯತೆಯಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಅನುಭವ ಹೊಂದಿರುವ ಹಿರಿಯ ನಾಯಕನಿಗೆ ಜವಾಬ್ದಾರಿ ಹೋಗಲಿದೆ ಎಂದು ಮೂಲಗಳು ತಿಳಿಸಿವೆ.