ಚಿಕ್ಕಮಗಳೂರು: ಶಾಸಕರೇ ಬಂದು ಉದ್ಘಾಟನೆ ಮಾಡಬೇಕು ಎಂದು ಮೂರು ಕೋಟಿ ರೂ. ವೆಚ್ಚದ ನೂತನ ಕಾಂಕ್ರೀಟ್ ರಸ್ತೆಗೆ ಸ್ಥಳೀಯ ಬಿಜೆಪಿ ಸದಸ್ಯರು ಬೇಲಿ ಹಾಕಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಮಾವಿನಹೊಲ, ಮಣ್ಣಿನಪಾಲ್ ಗ್ರಾಮದಲ್ಲಿ ನಡೆದಿದೆ.
ಕಳಸ ತಾಲೂಕಿನ ಮಾವಿನಹೊಲ ಹಾಗೂ ಮಣ್ಣಿನಪಾಲ್ ಗ್ರಾಮಗಳು ನಕ್ಸಲ್ ಪೀಡಿತ ಪ್ರದೇಶ. ಇಲ್ಲಿನ ರಸ್ತೆ ತುಂಬಾ ಹಾಳಾಗಿತ್ತು ಎಂದು 2018ರಲ್ಲಿ ರೇವಣ್ಣ ಲೋಕೋಪಯೋಗಿ ಸಚಿವ ಆದ ಸಂದರ್ಭದಲ್ಲಿ 3.20 ಕೋಟಿ ವೆಚ್ಚದಲ್ಲಿ 4 ಕಿ.ಮೀ ಕಾಂಕ್ರೀಟ್ ರಸ್ತೆ ಮಂಜೂರಾಗಿತ್ತು. ಅದಾದ ನಂತರ ರಸ್ತೆಯೂ ನಿರ್ಮಾಣವಾಗಿದೆ.
Advertisement
Advertisement
ಈ ರಸ್ತೆ ಮುಗಿದು ಮುಗಿದು ಸುಮಾರು ತಿಂಗಳೇ ಕಳೆದಿದೆ. ಆದರೆ, ಆ ರಸ್ತೆ ಉದ್ಘಾಟನೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿಯೇ ಬರಬೇಕು ಎಂದು ಇಲ್ಲಿನ ಬಿಜೆಪಿ ಸದಸ್ಯರು ರಸ್ತೆಗೆ ಬೇಲಿ ಹಾಕಿದ್ದಾರೆ. ರಸ್ತೆಗೆ ತಂತಿ ಬೇಲಿ ಹಾಕಿರುವ ಸದಸ್ಯರು ಜೆಸಿಬಿ ತರಿಸಿ ರಸ್ತೆ ಮೇಲೆ ಬಂಡೆಯಂತಹ ದೊಡ್ಡ-ದೊಡ್ಡ ಕಲ್ಲುಗಳನ್ನು ನಿಲ್ಲಿಸಿದ್ದಾರೆ. ರಸ್ತೆಯ ಆರಂಭದಲ್ಲಿ ಪೊಲೀಸ್ ಇಲಾಖೆಯ ಬ್ಯಾರೀಕೇಡ್ ಇಟ್ಟು ಬೀಗ ಹಾಕಿದ್ದಾರೆ. ಇದನ್ನೂ ಓದಿ: ಅನಿವಾರ್ಯತೆಗಳು ಬಂದಾಗ ಪರಿಸ್ಥಿತಿಗೆ ಅನುಗುಣವಾಗಿ ಮುಂದುವರಿಯಬೇಕು: ಹೊರಟ್ಟಿ
Advertisement
ಆದರೆ ಈ ರಸ್ತೆಯು ಬಹುಪಯೋಗಿ ಮಾರ್ಗವಾಗಿದ್ದು, ಈ ರಸ್ತೆಯ ಮೇಲೆ ಸ್ಥಳೀಯರು, ಪ್ರವಾಸಿಗರು ಅವಲಂಬಿರಾಗಿದ್ದಾರೆ. ಈ ಮಾರ್ಗ ಬಸರೀಕಟ್ಟೆ ಹಾಗೂ ಬಾಳೆಹೊನ್ನೂರಿಗೂ ಸಂಪರ್ಕ ಕಲ್ಪಿಸಿದೆ. ಈ ಮಾರ್ಗ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಜೊತೆಗೆ ಈ ಮಾರ್ಗದಿಂದ ಶಾರ್ಟ್‍ಕಟ್ ಎಂದು ಪ್ರವಾಸಿಗರು ಹೆಚ್ಚಾಗಿ ಓಡಾಡುತ್ತಾರೆ. ಇದನ್ನೂ ಓದಿ: ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ
Advertisement
ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೂ ಈ ಮಾರ್ಗ ಹತ್ತಿರದ ದಾರಿಯಾಗಿದೆ. ಆದರೆ, ನಿರ್ಮಾಣವಾಗಿ ಸಂಚಾರಕ್ಕೆ ಸಿದ್ಧವಾಗಿರುವ ಈ ರಸ್ತೆ ಉದ್ಘಾಟನೆಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿಯೇ ಬರಬೇಕು ಎಂದು ಕಾದು ರಸ್ತೆಗೆ ಬೇಲಿ ಹಾಕಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಗೆ ಹಣ ಕೊಟ್ಟಿರುವುದು ಸರ್ಕಾರವೋ ಅಥವಾ ಶಾಸಕರೋ ಎಂದು ಸ್ಥಳೀಯರು ಬೇಲಿ ಹಾಕಿರುವರ ವಿರುದ್ಧ ಕಿಡಿಕಾರಿದ್ದಾರೆ.