ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ (Sullia vidhanasabha Constituency) ದ ಶಾಸಕ ಎಸ್.ಅಂಗಾರ (S Angara) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಭಾರೀ ಕುತೂಹಲ ಕೆರಳಿಸಿದ್ದ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಕೊನೆಗೂ ಬಿಜೆಪಿ ಹೈಕಮಾಂಡ್ ಮಂಗಳವಾರ ರಿಲೀಸ್ ಮಾಡಿತ್ತು. ಈ ಬೆನ್ನಲ್ಲೇ ಕೆಲವು ಟಿಕೆಟ್ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಇವರಲ್ಲಿ ಎಸ್. ಅಂಗಾರ ಕೂಡ ಒಬ್ಬರಾಗಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ
- Advertisement 2
- Advertisement 3
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯದಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲ ಎಂದಿರುವ ಅಂಗಾರ, ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಹೋಗದಿರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?
- Advertisement 4
ಎಸ್.ಅಂಗಾರ ಅವರು ಆರು ಬಾರಿ ಶಾಸಕರಾಗಿದ್ದಾರೆ. ಆದರೆ ಈ ಬಾರಿ ಅಂಗಾರ ಬದಲು ಆದಿ ದ್ರಾವಿಡ ಸಮಾಜದ ಭಾಗೀರಥಿ ಮುರುಳ್ಯ (Bhagirathi Murulya) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.