ಬೆಳಗಾವಿ: ಸಭೆಯಲ್ಲಿ ಮಂತ್ರಿ ಮಂಡಲದ ಬಗ್ಗೆ ಏನೂ ಚರ್ಚೆ ಮಾಡಿಲ್ಲ, ಬದಲಿಗೆ ಬಜೆಟ್ ವಿಚಾರವನ್ನು ಚರ್ಚಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ್ ಹೇಳಿದರು.
ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಬೆಳಗಾವಿ ಬಿಜೆಪಿ ನಾಯಕರ ಗೌಪ್ಯ ಸಭೆ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಉಮೇಶ್ ಕತ್ತಿ ಹಾಗೂ ಜೊಲ್ಲೆ ಅವರು ಮಂತ್ರಿ ಇರುವುದರಿಂದ ನಮ್ಮ ಜಿಲ್ಲೆಯ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಈ ಬಗ್ಗೆ ಸಚಿವ ಉಮೇಶ್ ಕತ್ತಿ ಸಿಎಂ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
Advertisement
Advertisement
ಸಭೆಯಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಮಧ್ಯಾಹ್ನ 2 ಗಂಟೆಗೆ ಸಭೆ ಕರೆದಿದ್ದರು. ನಾನು 5 ಗಂಟೆಗೆ ಹೋಗಿದ್ದೆ. ನಾನು ಹೋದಾಗ ಚರ್ಚೆ ಎಲ್ಲಾ ಮುಗಿದಿತ್ತು. ಹೀಗಾಗಿ ಮೊದಲು ಸಭೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ನಿಗಾ ವಹಿಸಿ: ಕೆ.ಎಸ್.ಈಶ್ವರಪ್ಪ
Advertisement
Advertisement
ಬೆಳಗಾವಿ ಬಿಜೆಪಿಯಲ್ಲಿ ಗುಂಪುಗಾರಿಕೆ ನಡೀತಿದೆ ಎಂಬ ವಿಚಾರಕ್ಕೆ ಮಾತನಾಡಿ, ಮಂತ್ರಿ ಮನೆಗೆ ಹೋಗೋದು ಗುಂಪುಗಾರಿಕೆಯಾ? ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲಾ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: NDRF ಟ್ವಿಟ್ಟರ್ ಖಾತೆ ಹ್ಯಾಕ್