Connect with us

Crime

ಕ್ರಿಕೆಟ್ ಬ್ಯಾಟ್‍ನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಶಾಸಕ ಅರೆಸ್ಟ್

Published

on

ಭೋಪಾಲ್: ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ ಅವರ ಪುತ್ರ, ಇಂದೋರ್-3 ಕ್ಷೇತ್ರದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಇಂದು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಬೆಂಬಲಿಗನೊಬ್ಬನ ಕಟ್ಟಡ ತೆರುವುಗೊಳಿಸಿದ್ದಕ್ಕೆ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಆಗಿದ್ದೇನು?:
ಇಂದೋರ್ ನಗರದಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡಗಳನ್ನು ಇಂದು ಅಧಿಕಾರಿಗಳ ತೆರವು ಗೊಳಿಸುತ್ತಿದ್ದರು. ಆದರೆ ಶಾಸಕರು ತಮ್ಮ ಬೆಂಬಲಿಗನ ಕಟ್ಟಡ ತೆರವುಗೊಳಿಸದಂತೆ ಸೂಚನೆ ನೀಡಿದ್ದರು. ಇದಕ್ಕೆ ಕ್ಯಾರೆ ಎನ್ನದ ಅಧಿಕಾರಿಗಳು ಕಟ್ಟಡ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಶಾಸಕರ ಬೆಂಬಲಿಗರು ಅಧಿಕಾರಿಯ ಅಂಗಿ ಹಿಡಿದು ಎಳೆದಾಡಿದ್ದಾರೆ. ಘಟನೆಯಿಂದ ತಕ್ಷಣವೇ ಜಾಗೃತಗೊಂಡ ಪೊಲೀಸರು ಅಧಿಕಾರಿಯನ್ನು ರಕ್ಷಿಸಿದ್ದಾರೆ.

ಮಾಧ್ಯಮಗಳ ಮುಂದೆ ಆಕಾಶ್ ವಿಜಯ್ ವರ್ಗೀಯ ಹಲ್ಲೆ ಮಾಡಿದ್ದು ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ವೈರಲ್ ಆಗಿದೆ. ಶಾಸಕರು ಮಾತ್ರ ತಪ್ಪಿಗೆ ಕ್ಷಮೆ ಕೇಳುವ ಬದಲು, ಆಡಳಿತ ಪಕ್ಷವರು ಈ ರೀತಿಯ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.