ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದರು.
ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂಬ ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯಪಾಲರು ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ: ಟಿಜೆ ಅಬ್ರಹಾಂ
Advertisement
Advertisement
ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್ ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.
Advertisement
Advertisement
ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1,200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1,95,000 ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ ಎಂದು ವಿಜಯೇಂದ್ರ ಟೀಕಿಸಿದರು. ಇದನ್ನೂ ಓದಿ: ಪ್ರತಿದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡ್ಲೇಬೇಕು: ಭಾಸ್ಕರ್ ರಾವ್ ಬೇಸರ