ನಮ್ಮ ಆಡಳಿತಾವಧಿಯಲ್ಲಿ ಎನ್‌ಕೌಂಟರ್‌ಗಳಾಗಿದ್ದರೆ ಇವತ್ತು ಇಂತಹ‌ ಕೃತ್ಯಗಳಾಗುತ್ತಿರಲಿಲ್ಲ: ಯತ್ನಾಳ್‌

Public TV
1 Min Read
basanagouda patil yatnal hubballi

ಹುಬ್ಬಳ್ಳಿ: ನಮ್ಮ ಆಡಳಿತಾವಧಿಯಲ್ಲಿ ಎನ್‌ಕೌಂಟರ್‌ಗಳಾಗಿದ್ದರೆ ಇಂದು ಈ‌ ರೀತಿ‌ ಕೃತ್ಯಗಳಾಗುತ್ತಿರಲಿಲ್ಲ ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ (Basanagouda Patil Yatnal) ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಈ‌ ಹಿಂದೆ‌ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಮಾಡಿದ ತಪ್ಪಿನಿಂದಾಗಿ‌ ಜನ ಬುದ್ದಿ ಕಲಿಸಿದ್ದಾರೆ. ಈಗಾಗಲೇ ನಮ್ಮ‌ ಪಕ್ಷಕ್ಕೂ ಜನ ಸರಿಯಾದ ಬುದ್ದಿ ಕಲಿಸಿದ್ದಾರೆ ಎಂದು ಸ್ವಪಕ್ಷದ ವಿರುದ್ಧ ಯತ್ನಾಳ್‌ ಕಿಡಿಕಾರಿದ್ದಾರೆ. ಅಲ್ಲದೇ, ಕೆ.ಜೆ.ಹಳ್ಳಿ ಡಿ.ಜೆ.‌ಹಳ್ಳಿ ‌‌ಗಲಭೆ‌ ನಡೆದಾಗಲೇ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿರಲಿಲ್ಲ. ರಾಜ್ಯದಲ್ಲಿ ಗ್ಯಾರಂಟಿ ಜಾರಿಯಾದ ನಂತರ ಎಂಎಲ್‌ಎ ಹಾಗೂ ಜಿಲ್ಲಾ ಉಸ್ತುವಾರಿಗಳಿಗೆ ಉತ್ಪನ್ನ‌ ಕಡಿಮೆಯಾಗಿದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಡಿಕೆಶಿ ರಕ್ಷಣೆಗೆ ಸಿಎಂ, ಸರ್ಕಾರ ನಿಂತಿದೆ: ಹೆಚ್‍ಡಿಕೆ ಆರೋಪ

neha hiremath anjali hubballi

ಪೊಲೀಸ್ ಅಧಿಕಾರಿಗಳಿಂದ ಕೋಟಿ‌ ಕೋಟಿ‌ ಹಣ ವಸೂಲಿ ಮಾಡುತ್ತಾರೆ. ಇದರಿಂದ‌ ಗಾಂಜಾ ಅಫೀಮು ಅವ್ಯಾಹತವಾಗಿ ಮಾರಾಟವಾಗುತ್ತವೆ. ಪೊಲೀಸರ ವರ್ಗಾವಣೆ ಮಾಡಿ ದುಡ್ಡು‌ ತಿನ್ನೋದೇ ಶಾಸಕರ‌ ಕೆಲಸ ಎಂದು ಆರೋಪಿಸಿದ್ದಾರೆ.

ಮೈಸೂರು ವಿಮಾನ‌‌ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವಂತೆ ಅಧಿವೇಶನದಲ್ಲಿ ಮಾತನಾಡಿದವರು ಅಬ್ಬಯ್ಯ. ಅವರಿಗೆಲ್ಲಿ ಹತ್ಯೆಯಾದವರ ಕುಟುಂಬದ ಬಗ್ಗೆ ಕಾಳಜಿ ಬರಬೇಕು? ಅವರಿಗೆ ಹಿಂದೂಗಳ‌ ಮತ ಬೇಕಾಗಿಲ್ಲ. ಅವರ ವೋಟ್‌ಬ್ಯಾಂಕ್ ಬೇರೆ ಇದೆ. ಇಲ್ಲಿನ‌ ಸ್ಥಳೀಯ ಶಾಸಕರಾಗಿ ಮೊದಲು ಬಂದು‌ ಸಾಂತ್ವನ‌ ಹೇಳುವ ಕೆಲಸ ಮಾಡಬೇಕಿತ್ತು. ಆದರೆ ಅಧಿಕಾರಿಗಳನ್ನ‌ ವರ್ಗಾವಣೆ ಮಾಡಿಕೊಂಡು ದುಡ್ಡು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ‌ ಪ್ರಸಾದ್ ಅಬ್ಬಯ್ಯ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ

Share This Article