ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸರ್ಕಾರ ನನ್ನ ಮೇಲೆ ಪ್ರಕರಣ ದಾಖಲಿಸಿ ನನ್ನನ್ನು ಭಯಪಡಿಸಬಹುದು ಎಂದು ಅಂದುಕೊಂಡರೆ ಅವರ ಮೂರ್ಖತನ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.
ಈವರೆಗೂ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ದಾಖಲಿಸಿದ ಬಹುತೇಕ ಪ್ರಕರಣಗಳಲ್ಲಿ ಸರ್ಕಾರ ಸೋಲು ಒಪ್ಪಿಕೊಂಡು ಹೈಕೋರ್ಟ್ ಆದೇಶಕ್ಕೆ ಮಂಡಿಯೂರಿದೆ. ನನ್ನದು ಅಂಜುವ ಕುಲವಲ್ಲ, ಆಂಜನೇಯನ ಕುಲ ಎಂದು ಎಕ್ಸ್‌ನಲ್ಲಿ ಯತ್ನಾಳ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ: 35 ವರ್ಷದಲ್ಲೇ ದಾಖಲೆ – ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಮತದಾನ
ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.