– ರಾಹುಲ್ ಗಾಂಧಿ, ಸಿದ್ದರಾಮಯ್ಯಗೇಕೆ ಇವಿಎಂ ಮೇಲೆ ವಿಶ್ವಾಸ ಕಡಿಮೆ ಆಗಿದೆ? ಅಂತ ಪ್ರಶ್ನೆ
ಬೆಂಗಳೂರು: ಮೋದಿಜಿ (PM Modi) ಅವರಿಂದ ಮಾತ್ರ ಭಾರತವನ್ನ ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಹೇಳಿದರು.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಜನತೆ ಕಾಂಗ್ರೆಸ್ ಪಕ್ಷದ (Congress Party) ಬಗ್ಗೆ ಏಕೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾಃ ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನ ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇದನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದೆ ಪ್ರಸ್ತುತ ಇವಿಎಂ (EVM) ಮೇಲೆ ದೂರುವುದು ಮತ್ತು ದೋಷಪೂರಿತ ಎಂದು ಕಾಂಗ್ರೆಸ್ ಹೇಳುತ್ತಿರುವುದು ಹುಚ್ಚುತನದ ಪರಮಾವಧಿ ಎಂದು ಲೇವಡಿ ಮಾಡಿದರು.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರಿಗೆ ಇವಿಎಂ ಮೇಲೆ ಏಕೆ ವಿಶ್ವಾಸ ಕಡಿಮೆ ಆಗಿದೆ? ರಾಹುಲ್ ಗಾಂಧಿಯವರು ಸತತವಾಗಿ 3 ಬಾರಿ ಕೇಂದ್ರ ಲೋಕಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಇವಿಎಂ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಮೂರ್ಖತನದ ಪರಮಾವಧಿ: ವಿಜಯೇಂದ್ರ ಟೀಕೆ
ಬ್ಯಾಲೆಟ್ ಪೇಪರ್ (Ballot paper) ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯು ಬ್ಯಾಲೆಟ್ ಪೇಪರ್‌ಗೆ ಹೆದರುವುದಿಲ್ಲ, ನಾವು ಏಕೆ ಹೆದರಬೇಕು? ಎಂದು ಕೇಳಿದರಲ್ಲದೇ ಕೇಂದ್ರದಲ್ಲಿ ಸತತವಾಗಿ 3 ಬಾರಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಇದೆ. ಬಿಜೆಪಿ ಬ್ಯಾಲೆಟ್ ಪೇಪರ್‌ಗೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಇವಿಎಂ ಬಗ್ಗೆಯೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಾಪ್ ಸಿಂಹನನ್ನ ಬಿಜೆಪಿ ಕಿತ್ತು ಬಿಸಾಕಿದೆ, ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ: ಡಿಕೆಶಿ ಟಾಂಗ್
ರಾಹುಲ್ ಗಾಂಧಿಯವರಿಗೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಇವಿಎಂ ಬಗ್ಗೆ ಸಮಸ್ಯೆ ಇದ್ದರೆ ಕಾಂಗ್ರೆಸ್ ಪಕ್ಷ ಹಿಮಾಚಲ ಪ್ರದೇಶದಲ್ಲಿ ಹೇಗೆ ಅಧಿಕಾರಕ್ಕೆ ಬಂದಿತು? ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಅಧಿಕಾರಕ್ಕೆ ಬಂತು? ಇದೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಅಧಿಕಾರಕ್ಕೆ ಬಂತು? ಆ ಸಮಯದಲ್ಲಿ ಇವಿಎಂ ಸಮಸ್ಯೆ ಇರಲಿಲ್ಲವೇ? ಬ್ಯಾಲೆಟ್ ಪೇಪರ್ ಬೇಕು ಅನ್ನಿಸಲಿಲ್ಲವೇ? ಮಹಾರಾಷ್ಟ್ರ, ಹರಿಯಾಣ ಎಲ್ಲ ರಾಜ್ಯಗಳಲ್ಲಿ ಸತತವಾಗಿ ಸೋಲನ್ನು ಕಂಡಿರುವ ಕಾಂಗ್ರೆಸ್ ಪಕ್ಷದವರು ಇಂದು ಹತಾಶರಾಗಿ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇವಿಎಂ ದೋಷಪೂರಿತ ಎಂದು ಆರೋಪ ಮಾಡುತ್ತಾರೆ ಎಂದು ಕಿಡಿ ಕಾರಿದರು.
ಪ್ರಧಾನಿ ನರೇಂದ್ರ ಮೋದಿ ಜೀ ಅವರ ಅಪೇಕ್ಷೆಯಂತೆ ʻಒಂದು ದೇಶ ಒಂದು ಚುನಾವಣೆʼಯಿಂದ ದೇಶಕ್ಕೆ ಸಾಕಷ್ಟು ಒಳಿತಾಗುತ್ತದೆ. ಆ ನಿಟ್ಟಿನಲ್ಲಿ ಜನಾಭಿಪ್ರಾಯ ಮೂಡಿಸಬೇಕು ಸದುದ್ದೇಶ ಇಟ್ಟುಕೊಂಡು ದೇಶಾದ್ಯಂತ ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮ ನಡೆಯುತ್ತಿದೆ. ಆದ್ರೆ ಕಾಂಗ್ರೆಸ್ಸಿನವರು ಎಲ್ಲದರಲ್ಲೂ ವಿರೋಧ ಮಾಡುತ್ತಿದ್ದಾರೆ. ವಕ್ಫ್ ಬೋರ್ಡ್ ಬಗ್ಗೆ ಹೋರಾಟ ಮಾಡಿ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸಿದರು, ಆರ್ಟಿಕಲ್ 370 ಬಗ್ಗೆ ವಿರೋಧ ವ್ಯಕ್ತಪಡಿಸಿದರು, ಒಂದು ದೇಶ ಒಂದು ಚುನಾವಣೆಯನ್ನೂ ವಿರೋಧ ಮಾಡಿದರು. ಅದೇ ರೀತಿ ಇಂದು ಇವಿಎಂ ಅನ್ನು ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಬ್ಯಾಲೆಟ್ ಪೇಪರ್ = ಬೋಗಸ್ ವೋಟಿಂಗ್; ಬ್ಯಾಲೆಟ್ ಪೇಪರ್ = ಬೂತ್ ಕ್ಯಾಪ್ಚರಿಂಗ್: ಅಶೋಕ್ ಟೀಕೆ