– ಶಾಸಕ ದುರ್ಯೋಧನ ಐಹೊಳೆ ನಡೆಯಿಂದ ಬಿಜೆಪಿಗೆ ಮುಖಭಂಗ
ಬೆಳಗಾವಿ (ಚಿಕ್ಕೋಡಿ): ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ರಾಯಬಾಗದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರು 63ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.
ಜನ್ಮದಿನದ ನಿಮಿತ್ತ ಅನೇಕರಿಗೆ ಆಮಂತ್ರಣ ನೀಡಿದ್ದರಿಂದ ಸಾವಿರಾರು ಜನರು ಶಾಸಕರ ಸಾರೋಟ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಶಾಸಕರು ಹಾಗೂ ಧರ್ಮ ಪತ್ನಿ ಅವರನ್ನು ರಾಯಬಾಗ ಪಟ್ಟಣದಲ್ಲಿ ಮೆರವಣಿಗೆ ಮಾಡಿ, ಬಳಿಕ ವೇದಿಕೆಗೆ ಕರೆತರಲಾಯಿತು. ಆದರೆ ಹೆಸರಿಗೆ ಎಂಬಂತೆ ಸಾರೋಟದಲ್ಲಿ ಶಿವಕುಮಾರ ಶ್ರೀಗಳ ಭಾವ ಚಿತ್ರ ಇಟ್ಟು ಪೂಜೆ ಮಾಡಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಲು-ಬಾಯಿ ಜ್ವರದಿಂದ ಸಾವನ್ನಪ್ಪುತ್ತಿರುವ ರಾಸುಗಳು-ಇತ್ತ ರೆಸಾರ್ಟ್ ಸೇರಿಕೊಂಡ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ
Advertisement
Advertisement
ಸಂಜೆಯೂ ಗಾಯನ ಸ್ಪರ್ಧೆ ಹೆಸರಿನಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶೋಕಾಚರಣೆ ಹಾಗೂ ಭೀಕರ ಬರಗಾಲದ ನಡುವೆಯೂ ಶಾಸಕರು ಜನ್ಮದಿನಕ್ಕೆ ಲಕ್ಷಾಂತರ ಹಣ ಖರ್ಚು ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
Advertisement
ಶೋಕಾಚರಣೆ ನಡುವೆಯೂ ಕಾಂಗ್ರೆಸ್ ಸಚಿವ ಪ್ರಿಯಾಂಕ ಖರ್ಗೆ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ವಿರೋಧ ಮಾಡಿದ್ದವು. ಈಗ ಶಾಸಕ ದುರ್ಯೋಧನ ಐಹೊಳೆ ಅವರು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಬಿಜೆಪಿಗೆ ಸಾಕಷ್ಟು ಮುಜುಗುರ ತಂದಿದೆ. ಇದನ್ನೂ ಓದಿ: ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv