ಬೆಂಗಳೂರು: ಚುನಾವಣಾ ಆಯೋಗ (Election Commission) ಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ (Uday Garudachar)ಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ (ACMM Court) ಶಿಕ್ಷೆ ವಿಧಿಸಿದೆ.
Advertisement
2 ತಿಂಗಳು ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂಪಾಯಿ ದಂಡ (Fine) ವಿಧಿಸಿತು. ಆದರೆ 3 ವರ್ಷಕ್ಕಿಂತ ಕಡಿಮೆ ಶಿಕ್ಷೆಯ ಆದೇಶ ಹಿನ್ನೆಲೆಯಲ್ಲಿ ಅದೇ ಕೋರ್ಟ್ ಶಾಸಕ ಉದಯ್ ಗರುಡಾಚಾರ್ ಗೆ ಜಾಮೀನು (Bail) ಮಂಜೂರು ಮಾಡಿದೆ. ಜೊತೆಗೆ ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಹೋಗಲು ಅವಕಾಶ ನೀಡಿದೆ. ಇದನ್ನೂ ಓದಿ: ಹಿಜಬ್ ಪ್ರಕರಣ ಸಿಜೆಐಗೆ ಒಪ್ಪಿಸಿದ್ರಿಂದ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ: ಹೊರಟ್ಟಿ
Advertisement
Advertisement
ಇದು ನನಗೆ ಗೊತ್ತಲ್ಲದೇ ಆದ ಎಡವಟ್ಟು ಆಗಿದ್ದು, ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಹೋಗ್ತೀನಿ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ. ಉದಯ್ ಗರುಡಾಚಾರ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‍ನಲ್ಲಿ 2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಹೆಚ್.ಜಿ.ಪ್ರಶಾಂತ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.