ಚಿಕ್ಕಮಗಳೂರು: ನಿನ್ನೆ ರಾತ್ರಿ ಬಟ್ಟೆ ಹರಿದ ಸ್ಥಿತಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ (M.P Kumaraswamy) ತಮ್ಮ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆದಿದೆ, ಕಳ್ಳ ಹುಚ್ಚು ನಾಯಿಯಂತೆ ನನ್ನನು ಅಟ್ಟಾಡಿಸಿ ಚಪ್ಪಲಿಯಲ್ಲಿ ಹೊಡೆದ್ರು ಎಂದು ಆರೋಪಿಸಿದ್ರು. ಆದ್ರೆ ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Advertisement
ಪೊಲೀಸರು ಘಟನಾ ಸ್ಥಳದಿಂದ ಶಾಸಕರನ್ನು ಕರೆದೊಯ್ಯುವ ವೇಳೆ, ಅವರ ಮೈಮೇಲಿನ ಬಟ್ಟೆಗಳು ಹರಿದ ಸ್ಥಿತಿಯಲ್ಲಿ ಕಂಡುಬಂದಿರಲಿಲ್ಲ. ಈ ಬಗ್ಗೆ ಇಂದು ಸ್ಪಷ್ಟನೆ ನೀಡಿದ ಎಂ.ಪಿ ಕುಮಾರಸ್ವಾಮಿ, ಆಗ ವೈಟ್ ಬನಿಯನ್ ಇತ್ತು ಅದಕ್ಕೆ ಹರಿದಿದ್ದು ಸರಿಯಾಗಿ ಕ್ಯಾಮೆರಾದಲ್ಲಿ ದಾಖಲಾಗಿಲ್ಲ ಅಂದಿದ್ದಾರೆ. ಆದ್ರೆ, ಶರ್ಟ್ ಹರಿದಿರೋ ವೀಡಿಯೋದಲ್ಲಿಯೂ ಅವರು ಬನಿಯನ್ ಧರಿಸಿರೋದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಆದ್ರೂ, ಎಂಪಿ ಕುಮಾರಸ್ವಾಮಿ, ನನ್ನನ್ನು ಚಪ್ಪಲಿಯಿಂದ ಹೊಡೆದ್ರು. ಕಳ್ಳ ಹುಚ್ಚುನಾಯಿಯಂತೆ ನನ್ನನ್ನು ಅಟ್ಟಾಡಿಸಿ ಚಪ್ಪಲಿಯಲ್ಲಿ ಹೊಡೆದ್ರು. ಇದು ಆನೆ ದಾಳಿಯಲ್ಲ. ರಾಜಕೀಯ ದಾಳಿ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತದೇಹ ನೋಡಲು ಬಂದ ಶಾಸಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ
Advertisement
Advertisement
ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿದರು ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ಕಲ್ಲು ಹೊಡೆದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ. ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ. ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ? ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ. ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ವರಿಷ್ಠರಿಗೆ ದೂರು ಕೊಡೋದಾಗಿ ಹೇಳಿದ್ದಾರೆ. ಆದ್ರೆ ತಮ್ಮ ಮೇಲಿನ ದಾಳಿ ಬಗ್ಗೆ ಎಂ.ಪಿ ಕುಮಾರಸ್ವಾಮಿ ಪೊಲೀಸರಿಗೆ ದೂರು ಕೂಡ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ಕಾಫಿನಾಡಿನ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಯುವಕನ ವಿರುದ್ಧ ಯುವತಿ ದೂರು