ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸ್ವಪಕ್ಷದ ಮುಖಂಡ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಶಾಸಕರು, ಅಲ್ಪನಿಗೆ ಐಶ್ವರ್ಯ ಬಂದರೆ ಏನ್ ಮಾಡುತ್ತಾರೋ ಅದೇ ರೀತಿ ಡಿಸಿಎಂ ಲಕ್ಷ್ಮಣ ಸವದಿ ಸ್ಥಿತಿಯಾಗಿದೆ. ನಿಜಕ್ಕೂ ಲಕ್ಷ್ಮಣ ಸವದಿ ವರ್ತನೆ ಸರಿಯಲ್ಲ. ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಗುಡುಗಿದರು. ಇದನ್ನೂ ಓದಿ: ಸವದಿ ಬೇಜವಾಬ್ದಾರಿ ಹೇಳಿಕೆಯಿಂದ ಹಾಳಾದ್ರು, ಇನ್ನೂ ಹಾಳಾಗ್ತಾರೆ: ರಮೇಶ್ ಜಾರಕಿಹೊಳಿ
Advertisement
Advertisement
ಸೋತವರು ಉಪಮುಖ್ಯಮಂತ್ರಿ ಆಗಿದ್ದು ಇತಿಹಾಸದಲ್ಲಿಯೇ ಇಲ್ಲ. ಆದರೆ ಇತಿಹಾಸ ಸೃಷ್ಟಿಸಿ ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಪದವಿ ನೀಡಲಾಗಿದೆ. ಅದು ಅನರ್ಹ ಶಾಸಕರಿಂದ ತ್ಯಾಗದಿಂದ ಅಧಿಕಾರಕ್ಕೆ ಬಂದಿದ್ದು. ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುವುದು ಎಷ್ಟು ಸೂಕ್ತ. ಅಷ್ಟೇ ಅಲ್ಲದೆ ಈಗ ಉಪಚುನಾವಣೆ ಬಂದಿದೆ. ಹತಾಶಯ ಮನೋಭಾವದಿಂದ ಹೀಗೆ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಈಶ್ವರಪ್ಪ, ಯಡಿಯೂರಪ್ಪ ಲವ ಕುಶ ಇದ್ದಂತೆ: ರೇಣುಕಾಚಾರ್ಯ
Advertisement
ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಪಕ್ಷ ವರಿಷ್ಠರು ಸಭೆ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಜಾತ್ಯತೀತ ನಾಯಕರು. ಅವರನ್ನ ಒಂದೇ ಜಾತಿಗೆ ಸೇರಿಸಲು ಸಾಧ್ಯವಿಲ್ಲ ಎಂದು ಹೇಳಿದರು.