ದಾವಣಗೆರೆ: ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ವಿಕೃತ ಮನಸ್ಸಿನ ವ್ಯಕ್ತಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.
ನ್ಯಾಮತಿ ತಾಲೂಕಿನ ರಾಮತೀರ್ಥದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಮಾಜಿ ರಾಜ್ಯಪಾಲ ಹಂಸರಾಜ್ ಅಲ್ಲ, ಅವರು ಧ್ವಂಸರಾಜ್. ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ನೀಡಿದ ವರದಿಗೆ ಅನುಮತಿ ಕೊಟ್ಟರು. ಈ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ, ಜೈಲಿಗೆ ಹೋಗುವಂತೆ ಮಾಡಿದ್ದರು ಎಂದು ಆರೋಪಿಸಿದರು.
Advertisement
ಬಿ.ಎಸ್.ಯಡಿಯೂರಪ್ಪ ಅವರು ಭ್ರಷ್ಟಾಚಾರ ಮಾಡಿಲ್ಲ, ಲೂಟಿ ಮಾಡಲಿಲ್ಲ. ಅವರನ್ನು ರಾಜಕೀಯ ಷಡ್ಯಂತ್ರದಿಂದ ಜೈಲಿಗೆ ಕಳುಹಿಸಲಾಯಿತು. ಯಡಿಯೂರಪ್ಪನವರು ಜೈಲಿಗೆ ಹೋದಾಗ ಬಿಜೆಪಿಯವರು ಯಾವುದೇ ಗಲಾಟೆ ಮಾಡಲಿಲ್ಲ. ಆದರೆ ಮಾಜಿ ಸಚಿವ ಡಿ.ಕೆ.ಸಚಿವ ಡಿ.ಕೆ.ಶಿವಕುಮಾರ್ ಬಂಧನವಾಗಿದ್ದಕ್ಕೆ ಕಾಂಗ್ರೆಸ್‍ನವರು ಪ್ರತಿಭಟನೆ ನಡೆಸಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ ಎಂದು ದೂರಿದರು.
Advertisement
Advertisement
ಕಾಂಗ್ರೆಸ್‍ನವರು ಬಿ.ಎಸ್. ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುತ್ತಿದ್ದರು. ಆದರೆ ಈಗ ಕೇಂದ್ರ ಮಾಜಿ ಗೃಹ ಸಚಿವ ಪಿ.ಚಿದಂಬರಂ ಜೈಲಿಗೆ ಹೋಗಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ನನಗೆ ಸ್ನೇಹಿತರು. ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದಕ್ಕೆ ನಾನು ಖುಷಿಪಡುವುದಿಲ್ಲ ಎಂದು ಹೇಳಿದರು.
Advertisement
ರಾಜಕಾರಣಿಗಳ ಹೇಳಿಕೆಗಳಲ್ಲಿ ಸ್ವಲ್ಪ ವ್ಯತ್ಯಾಸವಾಗಿರಬಹುದು. ಅದನ್ನು ವೈಭವೀಕರಣ ಮಾಡುವುದು ಸರಿಯಲ್ಲ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯರು. ಅವರು ಉದ್ಧಟತನದ ಹೇಳಿಕೆ ನೀಡುವವರಲ್ಲ. ಮಾಧ್ಯಮದವರು ಎಡವಿದ ವ್ಯಕ್ತಿಗಳನ್ನು ಮೇಲಕ್ಕೆ ಎತ್ತಿ ಅವರ ಮನಸ್ಸನ್ನ ಪರಿವರ್ತನೆ ಮಾಡಬೇಕು. ನಾನು ಅನರ್ಹರು ಬಿಜೆಪಿ ಸೇರಿದ್ದಾರೆಂದು ಹೇಳಿಲ್ಲ. ಆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಅಂತ ಹೇಳಿದ್ದೇನೆ ಎಂದರು.