– ಕೋರ್ಟ್ ಹಾಲ್‌ನಲ್ಲಿ ತಲೆ ಸುತ್ತು ಎಂದ ಮಾಡಾಳ್
ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಮಾಡಿದೆ.
ಲೋಕಾಯುಕ್ತ ಟ್ರ್ಯಾಪ್ ಹಾಗೂ ರೇಡ್ ವೇಳೆ ಕಚೇರಿ ಹಾಗೂ ಮನೆಯಲ್ಲಿ ಸಿಕ್ಕ 8 ಕೋಟಿ ಹಣದ ಸಂಬಂಧ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ (Court) ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಏಪ್ರಿಲ್ 1ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಲೋಕಾಯುಕ್ತ 10ದಿನ ಕಸ್ಟಡಿಗೆ ಕೇಳಿತ್ತು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡನೆ ಮಾಡಿದ್ದಾರೆ. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮನವಿ ಮಾಡಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರದವರೆಗೆ ಅಂದರೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ
ಈ ವೇಳೆ ಕೋರ್ಟ್ ಹಾಲ್‌ನಲ್ಲಿ ನನಗೆ ತಲೆ ಸುತ್ತು ಎಂದು ಮಾಡಾಳ್ ಹೇಳಿದ್ದರು. ಕುಳಿತುಕೊಳ್ಳಲು ಮಾಡಾಳ್ ಮನವಿ ಮಾಡಿದ್ದಾರೆ. ಈ ವೇಳೆ ನ್ಯಾಯಾಧೀಶರ ಅನುಮತಿ ಮೇರೆಗೆ ಮಾಡಾಳ್ ಕುಳಿತುಕೊಂಡರು. ಇದನ್ನೂ ಓದಿ: ಕಾರ್ಮಿಕರನ್ನು ಸತಾಯಿಸಿ ಮನಬಂದಂತೆ ಕಿಟ್‌ಗಳನ್ನು ಎಸೆದ ಸಿಬ್ಬಂದಿ