ಬೆಂಗಳೂರು: ನನಗೆ ಎಂಎಸ್‍ಐಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ನನಗೆ ಎಂಎಸ್‍ಐಎಲ್ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನ ನನಗೆ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ಉಪ ಚುನಾವಣೆಯಲ್ಲಿ ಗೆದ್ದ 11 ಜನ ಶಾಸಕರ ಪೈಕಿ 10 ಜನರಿಗೆ ಸಚಿವಸ್ಥಾನ ನೀಡಲಾಗಿದೆ. ಹೀಗಾಗಿ ಸಚಿವ ಸ್ಥಾನ ವಂಚಿತ ಮಹೇಶ್ ಕುಮಟಳ್ಳಿ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನ ನೀಡಿ ಸಿಎಂ ಆದೇಶ ಹೊರಡಿಸಿದ್ದರು. ಆದರೆ ಇದರಿಂದ ಕಿಡಿಕಾರಿದ ಮಹೇಶ್ ಕುಮಟಳ್ಳಿ ಅವರು ಎಂಎಸ್‍ಐಎಲ್ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ.
Advertisement
ಸಚಿವ ಸ್ಥಾನ ಕೈ ತಪ್ಪಿದರೂ, ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದರು. ಮಂತ್ರಿ ಸ್ಥಾನ ಕೊನೆ ಕ್ಷಣದಲ್ಲಿ ಕೈತಪ್ಪಿ ಕುದಿಯುತ್ತಿರುವ ಶಾಸಕ ಉಮೇಶ್ ಕತ್ತಿ, ನನಗಿಂತ ಸವದಿಗೆ ಅನುಭವ ಹೆಚ್ಚು. ಹೀಗಾಗಿ ಅವರು ಸಚಿವರಾಗಿದ್ದಾರೆ ಅಂತ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.