ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಸಿಎಂ

Public TV
1 Min Read
mohan charan majhi

ಭುವನೇಶ್ವರ: ಒಡಿಶಾದ (Odisha) ನೂತನ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕರಾಗಿರುವ ಮೋಹನ್ ಚರಣ್ ಮಾಝಿ (Mohan Charan Majhi) ಅವರನ್ನು ಬಿಜೆಪಿ (BJP) ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ.ಸಿಂಗ್‌ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಗಳು ಎಂದು ಹೆಸರಿಸಲಾಗಿದೆ.

ಮಾಝಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಘೋಷಿಸಿದ್ದಾರೆ. ಇದನ್ನೂ ಓದಿ: ಮಾಹಿತಿ , ಪ್ರಸಾರ ಖಾತೆ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ

Rajnath Singh

ಈಚೆಗೆ ನಡೆದ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಕಿಯೋಂಜಾರ್ ಕ್ಷೇತ್ರದಿಂದ ಮಾಝಿ ಗೆಲುವು ಸಾಧಿಸಿದ್ದರು. ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳ ಅಂತರದಿಂದ ಸೋಲಿಸಿದ್ದರು.

ಒಡಿಶಾ ವಿಧಾನಸಭೆಯಲ್ಲಿ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಬಿಜೆಪಿ ಗೆಲುವು ದಾಖಲಿಸಿತ್ತು. ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಹೀನಾಯ ಸೋಲನುಭವಿಸಿತು. ಒಡಿಶಾದಲ್ಲಿ ತನ್ನ ಚೊಚ್ಚಲ ಸರ್ಕಾರವನ್ನು ರಚಿಸಲು ಸಜ್ಜಾಗಿರುವ ಬಿಜೆಪಿಯು ಜೂನ್ 12 ರಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಬಿಜೆಡಿ ಅಧ್ಯಕ್ಷ ಮತ್ತು ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನೂ ಆಹ್ವಾನಿಸಿದೆ. ಇದನ್ನೂ ಓದಿ: ಅನಗತ್ಯ ಹೇಳಿಕೆಗಳನ್ನು ನೀಡಬೇಡಿ, ಸರಿಯಾಗಿ ಸಮಯ ಪಾಲನೆ ಮಾಡಿ: ಸಚಿವರಿಗೆ ಮೋದಿ ಪಾಠ

Share This Article