– ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ
– ಅಹರ್ನ ಶಾಸಕರ ಬಗ್ಗೆ ಗೌರವ, ವಿಶ್ವಾಸವಿದೆ
ದಾವಣಗೆರೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ರಾಷ್ಟ್ರಪತಿಗಳು ತುಘಲಕ್ ದರ್ಬಾರ್ ನಡೆಸಿದರು ಎಂದು ಎಡವಟ್ಟು ಮಾಡಿಕೊಂಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಅಂತ ಅಸಮಾಧಾನದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‍ನ 17 ಜನ ಶಾಸಕರು ರಾಜೀನಾಮೆ ನೀಡಿದರು. ಸುಪ್ರೀಂಕೋರ್ಟ್ ಇದನ್ನು ಎತ್ತಿ ಹಿಡಿದಿದೆ. ಆದರೆ ರಾಜೀನಾಮೆಯನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಂಗೀಕರಿಸದೆ ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸಿ ಶಾಸಕರನ್ನು ಅನರ್ಹಗೊಳಿಸಿದರು. ಆದರೆ ನಾನು ಮಾತ್ರ ಅವರನ್ನು ಅನರ್ಹರು ಅಂತ ಕರೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕುಚು-ಕುಚು ಮಾಡಿ ಅಧಿಕಾರಕ್ಕೆ ಬಂದಿತ್ತು
Advertisement
Advertisement
ಬಿಜೆಪಿಗೆ ಸಂಘಟನೆ ಹಾಗೂ ಚುನಾವಣೆ ಹೊಸದೇನಲ್ಲ. ಪಕ್ಷದ ಸಂಘಟನೆ ಯಾವತ್ತೂ ನಿಂತ ನೀರಲ್ಲ. ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಉಪಚುನಾವಣೆಯ 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷ ತೀರ್ಮಾನ ಮಾಡುತ್ತದೆ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಜನರು ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಅನರ್ಹ ಶಾಸಕರ ಬಗ್ಗೆ ವಿಶ್ವಾಸ, ಗೌರವ ಇದೆ. 17 ಜನ ರಾಜೀನಾಮೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಆದರೂ ಮಾಜಿ ಸ್ಪೀಕರ್ ತುಘಲಕ್ ದರ್ಬಾರ್ ನಡೆಸಿ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಶಾಸಕರ ಪರ ತೀರ್ಪು ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
Advertisement
ಎಚ್‍ಡಿಕೆ ಲಾಟರಿ ಸಿಎಂ:
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬ ರಾಜಕಾರಣ ಮುಗಿದ ಅಧ್ಯಾಯ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಲಾಟರಿ ಮುಖ್ಯಮಂತ್ರಿ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ರಾಜ್ಯದ ಜನರು ತಿರಸ್ಕರಿಸಿದ್ದಾರೆ. ಹೀಗಾಗಿ ಉಪ ಚುನಾವಣೆಯಲ್ಲಿಯೂ ಎರಡು ಪಕ್ಷಗಳ ಅಭ್ಯರ್ಥಿಗಳನ್ನು ಮತದಾರರು ಕೈಬಿಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.