ಶಬರಿಮಲೆ ಯಾತ್ರೆಯಲ್ಲಿ ಮಸೀದಿ ಭೇಟಿ ಬೇಡ: ಬಿಜೆಪಿ ಶಾಸಕ ರಾಜಾ ಸಿಂಗ್‌

Public TV
1 Min Read
raja singh bjp

ಹೈದರಾಬಾದ್: ಕೇರಳದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬೇಡಿ ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ತಿಳಿಸಿದ್ದಾರೆ.

ಭಕ್ತರು ‘ಅಯ್ಯಪ್ಪ ದೀಕ್ಷಾ’ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಲಾಧಾರಿಗಳು ಮಸೀದಿಗೆ ಹೋದರೆ ಅವರು ಅಶುದ್ಧರಾಗುತ್ತಾರೆ. ಭಕ್ತರನ್ನು ಮಸೀದಿಗೆ ಬರುವಂತೆ ಮಾಡಿರುವುದು ಷಡ್ಯಂತ್ರ ಎಂದು ಸಿಂಗ್ ಹೇಳಿದ್ದಾರೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಎ ರೇವಂತ್ ರೆಡ್ಡಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರು ಭಕ್ತರಿಗೆ ವಸತಿ ನಿರ್ಮಿಸಲು 10 ಎಕರೆ ಜಾಗವನ್ನು ಕೋರಿ ಕೇರಳ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಗೋಶಾಮಹಲ್‌ ಶಾಸಕ ಶಾಸಕ ರಾಜಾಸಿಂಗ್‌ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಪರ-ವಿರೋಧ ಮಾತು ವ್ಯಕ್ತವಾಗುತ್ತದೆ.

Share This Article