ಹೈದರಾಬಾದ್: ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದು ಹಾಡಿದ್ದ ಬಿಜೆಪಿ ಶಾಸಕ ಟಿ. ರಾಜಾ ವಿರುದ್ಧ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ನಲ್ಲಿ ರಾಮನವಮಿ ಯಾತ್ರೆಯಲ್ಲಿ ಪಾಲ್ಗೋಂಡಿದ್ದ ಅವರು ಹಿಂದೂ ರಾಷ್ಟ್ರದ ಬಗ್ಗೆ ಒಂದು ಹಾಡನ್ನು ಹಾಡಿದ್ದರು. ಅದರಲ್ಲಿ ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ. ಶ್ರೀರಾಮನ ಹೆಸರನ್ನು ತೆಗೆದುಕೊಳ್ಳದವರು ಭಾರತದಿಂದ ಹೊರಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದರು.
ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿದೆ. ಈಗ ಮಥುರಾ ಮತ್ತು ಕಾಶಿ ಎಂದ ಅರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಲ್ಡೋಜರ್ ಅನ್ನು ಸ್ವಚ್ಛಗೊಳಿಸಲು ಬಳಸುತ್ತಾರೆ. ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ. ಅದೇ ಹಾಡಿನಲ್ಲಿ ರಾಮನ ಹೆಸರನ್ನು ತೆಗೆದುಕೊಳ್ಳದವರು ಮುಂದಿನ ದಿನಗಳಲ್ಲಿ ಭಾರತದಿಂದ ಓಡಿಹೋಗಬೇಕಾಗುತ್ತದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಓಲೈಕೆ ರಾಜಕಾರಣ ಗೊತ್ತಿಲ್ಲ: ಇಬ್ಬರು ಮಾಜಿ ಸಿಎಂಗಳಿಗೆ ಕುಟುಕಿದ ಬೊಮ್ಮಾಯಿ
ಈ ಹಾಡಿಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೈದರಾಬಾದ್ನ ಪೊಲೀಸರು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮದಂಗಲ್ ಅಭಿಯಾನಕ್ಕೆ ರೋಡ್ ಸೇರ್ಪಡೆ- ಮುಸ್ಲಿಂ ಹೆಸರುಳ್ಳ ರಸ್ತೆಗಳನ್ನು ಬದಲಿಸಲು ಆಗ್ರಹ