Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Bengaluru City

ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Public TV
Last updated: July 18, 2024 11:32 am
Public TV
Share
2 Min Read
BY vijayendra
SHARE

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ, ಕೆಲಹೊತ್ತಿನಲ್ಲೇ ತಾತ್ಕಾಲಿಕ ತಡೆ ನೀಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ. ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಲಾಗಿದೆ. ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?
ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?
ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?”

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ @siddaramaiah ನವರ ನೇತೃತ್ವದ @INCKarnataka… pic.twitter.com/9hVm9ubH2W

— Vijayendra Yediyurappa (@BYVijayendra) July 18, 2024

ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು’ ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ.

ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮೂರು ಬಾರಿ ಯೂಟರ್ನ್ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ ನೀಡುವ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುತ್ತಿದೆ: ಡಿಕೆಶಿ

Siddaramaiah 8

ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.

ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ ವಿಚಾರ – ಸಾಧಕ ಬಾದಕ ನೋಡಿ ತೀರ್ಮಾನ ಮಾಡುತ್ತೇವೆ: ಪ್ರಿಯಾಂಕ್‌ ಖರ್ಗೆ

ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

TAGGED:kannadigaskarnatakareservationVijayendraಕನ್ನಡಿಗರುಬಿ.ವೈ.ವಿಜಯೇಂದ್ರಮೀಸಲಾತಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
4 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
21 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
39 minutes ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
2 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?