ಬೆಂಗಳೂರು: ಸತತ ಐದು ದಿನಗಳ ಕಾಲ ಶಾಸಕರನ್ನು ರೆಸಾರ್ಟ್ ನಲ್ಲಿ ಉಳಿಸಿಕೊಂಡಿದ್ದಕ್ಕೆ ಬಿಜೆಪಿ, ಹತ್ತಿರ 4 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ. ಶಾಸಕರ ರೆಸಾರ್ಟ್ ರಾಜಕೀಯ ಅಂತ್ಯವಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿಗೆ ಶಾಸಕರು ವಾಪಸ್ ಬರುತ್ತಿದ್ದಾರೆ.
104 ಶಾಸಕರ ಪೈಕಿ ಐವರು ಮಾತ್ರ ರೆಸಾರ್ಟಿಗೆ ಹೋಗಿರಲಿಲ್ಲ. ಶಾಸಕ ಗೋವಿಂದ ಕಾರಜೋಳ, ಎಸ್.ಎ. ರವೀಂದ್ರನಾಥ್, ಕರುಣಾಕರೆಡ್ಡಿ, ಸಿ.ಎಂ. ಉದಾಸಿ ಮತ್ತು ಸಿ.ಟಿ. ರವಿ ರೆಸಾರ್ಟ್ ಗೆ ಹೋಗಲಿಲ್ಲ. ಉಳಿದ 99 ಶಾಸಕರು ರೆಸಾರ್ಟ್ ನಲ್ಲಿ ತಂಗಿದ್ದರು.
Advertisement
Advertisement
ಗುರುಗ್ರಾಮದ ಐಟಿಸಿ ಗ್ರಾಂಡ್ ಭಾರತ್, ಲೆಮೆನ್ ಟ್ರೀ ಮತ್ತು ಮುಂಬೈ ರೆಸಾರ್ಟ್ ನಲ್ಲಿ ಬಿಜೆಪಿ ಶಾಸಕರು ತಂಗಿದ್ದರು. ಮೊದಲ 5 ದಿನ ಐಶಾರಾಮಿ ಐಟಿಸಿ ಗ್ರಾಂಡ್ ಭಾರತ್ ರೆಸಾರ್ಟ್ ನಲ್ಲಿ ಬಿಜೆಪಿಯ 97 ಶಾಸಕರು ಇದ್ದರು. ಐಟಿಸಿ ಗ್ರಾಂಡ್ ಭಾರತ್ `7′ ಸೌಲಭ್ಯದ ರೆಸಾರ್ಟ್ ಆಗಿದ್ದು, ಇಲ್ಲಿ ಒಂದು ದಿನಕ್ಕೆ ಒಂದು ರೂಮಿಗೆ ಕನಿಷ್ಟ 25 ಸಾವಿರ ರೂ. ಇದೆ. ಇಲ್ಲಿನ ವಿಲ್ಲಾಗಳ ಒಂದು ದಿನದ ಬಾಡಿಗೆ ಬರೋಬ್ಬರಿ 3 ಲಕ್ಷ ರೂಪಾಯಿ ಆಗಿದ್ದರೆ, ಬಿಜೆಪಿ ಶಾಸಕರು ಉಳಿದುಕೊಂಡಿದ್ದ ರೂಮ್ ಗಳ ಒಂದು ದಿನದ ಬಾಡಿಗೆ 75 ಸಾವಿರ ರೂ. ಇದೆ.
Advertisement
ಬಿಜೆಪಿ ತನ್ನ ಶಾಸಕರಿಗಾಗಿ ಒಟ್ಟು 60 ರೂಮ್ ಗಳನ್ನು ಬುಕ್ ಮಾಡಿತ್ತು. ಒಟ್ಟು ಗುರುಗ್ರಾಮದ ಐಶಾರಾಮಿ ರೂಮ್ ಬಾಡಿಗೆಯೇ 2 ಕೋಟಿ 27 ಲಕ್ಷ ರೂಪಾಯಿ ಆಗಿದೆ. ಇನ್ನೂ ರೂಮ್ ಬಾಡಿಗೆ, ಜಿಮ್, ಹೇರ್ ಸೆಲೂನ್, ಬಾಡಿ ಮಸಾಜ್, ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಎಲ್ಲ ಪ್ಯಾಕೇಜ್ ಕೂಡ ಇತ್ತು. ಮಧ್ಯಾಹ್ನ, ರಾತ್ರಿ ಊಟ ಹಾಗೂ ಮದ್ಯದ ವೆಚ್ಚ ಬೇರೆ ಇತ್ತು.
Advertisement
ಲೆಮನ್ ಟ್ರೀ ರೆಸಾರ್ಟ್ ನಲ್ಲಿ 23 ಶಾಸಕರು ಇದ್ದರು. ಅದರ ಖರ್ಚು ಒಟ್ಟು 10 ಲಕ್ಷ ರೂಪಾಯಿ ಆಗಿದ್ದು, ರೂಮ್ ಬಾಡಿಗೆ ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಪ್ಯಾಕೇಜ್ ಆಗಿತ್ತು. ಒಟ್ಟಾರೆ ಆಪರೇಷನ್ ಕಮಲ ಮಾಡಲು ಬಿಜೆಪಿ ನಾಯಕರು 3.16 ಕೋಟಿ ರೂಪಾಯಿ ವೆಚ್ಚ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv