ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 6 ರ ಒಳಗಡೆ ನಾಗೇಂದ್ರ (Nagendra) ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಜೂನ್ 7 ರಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಬಿಜೆಪಿ (BJP) ಪರಿಷತ್ ಸದಸ್ಯ ರವಿಕುಮಾರ್ (MLC Ravikumar)s ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಎಲ್ಲಾ ಮಾಜಿ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತೇವೆ. ತನಿಖೆ ನಡೆಯುವ ವೇಳೆ ಸಚಿವರು ತನಿಖಾಧಿಕಾರಿ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರ ನಾಶ ಮಾಡೋದಕ್ಕೆ ನನ್ನ, ಸಿಎಂ ಮೇಲೆ ಶತ್ರು ಭೈರವಿ ಯಾಗ ಮಾಡಿಸ್ತಿದ್ದಾರೆ: ಡಿಕೆಶಿ ಬಾಂಬ್
ಸಾಮಾನ್ಯ ಕ್ರಿಮಿನಲ್ ಕೇಸ್ ಅಲ್ಲ. ಸರ್ಕಾರಿ ಅಧಿಕಾರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಭ್ರಷ್ಟಾಚಾರ ಹೊರಗೆ ತರಲಾಗದೇ ಬೇಸತ್ತು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್
ಸರ್ಕಾರದ ಅನೇಕ ಅಧಿಕಾರಿಗಳು ಶಾಮಿಲಾಗಿದ್ದಾರೆ. ಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಲಾಗದೆ ಸಾವನ್ನಪ್ಪಿದ್ದಾರೆ. ಅಧಿಕಾರಿ ಅಸಹಾಯಕತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮೊದಲು ಅಕ್ರಮಕ್ಕೆ ಕಾರಣರಾದ ಅಧಿಕಾರಿಗಳ ಹೆಸರು ಬರೆದಿಟ್ಟಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವುದು ಬೇಡ . ಸಿಬಿಐಗೆ ಕೇಸ್ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿರುವುದು ಸಿಎಂ ಮತ್ತು ಸಚಿವರ ಗಮನಕ್ಕೆ ಇದೆ. ಹಣ ವಾಪಸ್ ಬರಬಹುದು ಆದರೆ ಮೃತ ಚಂದ್ರಶೇಖರನ್ ಅವರ ಜೀವ ವಾಪಸ್ ಬರುತ್ತದೆಯೇ? ಪ್ರಿಯಾಂಕ್ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.