ಬೆಂಗಳೂರು: ಕಲಬುರಗಿ (Kalaburagi) ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ (N Ravikumar) ವಿರುದ್ಧ ಎಫ್ಐಆರ್ ದಾಖಲಾಗಿದ್ದು ಬಂಧನ ಭೀತಿ ಎದುರಾಗಿದೆ.
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ (Kalaburagi Chalo) ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ರವಿಕುಮಾರ್, ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಲಾಗಿತ್ತು. ಈ ಸಂಬಂಧ ಎಫ್ಐಆರ್ (FIR) ಸಹ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಇದನ್ನೂ ಓದಿ: ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ
ಈ ನಡುವೆ ಎಫ್ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ರವಿಕುಮಾರ್ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಹೈಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಅಲ್ಲದೇ ಬುಧವಾರ (ಮೇ 28) ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಾಳೆ (ಮೇ 30) ನಡೆಯಲಿದೆ. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್
ಇನ್ನೂ ಬಿಜೆಪಿ ಎನ್. ರವಿಕುಮಾರ್ ಅವರ ಪರ ನಿಲ್ಲಲ್ಲು ತೀರ್ಮಾನ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್
ರವಿಕುಮಾರ್ ಹೇಳಿದ್ದೇನು?
ಮೇ 24 ರಂದು ಬಿಜೆಪಿಯ ʻಕಲಬುರಗಿ ಚಲೋʼ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಎನ್. ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ನಾಲಿಗೆ ಹರಿಬಿಟ್ಟಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು.
ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರವಿಕುಮಾರ್ ಅವರ ಹೇಳಿಕೆ ವಿರುದ್ಧ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?